ರಾಜಕೀಯ

ಕಾಂಗ್ರೆಸ್ ವಿರುದ್ದ ಮತ್ತೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ

ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲಾ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಅಸಮಾಧಾನ ಇದ್ದು, ತಮಗೆ ಕಾಂಗ್ರೆಸ್ ಬಗ್ಗೆಯೂ ಅತೃಪ್ತಿ ಇದೆ...

ಕಾಂಗ್ರೆಸ್ ವಿರುದ್ದ ಮತ್ತೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ
Published On :
ಬೆಂಗಳೂರು: ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲಾ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಅಸಮಾಧಾನ ಇದ್ದು, ತಮಗೆ ಕಾಂಗ್ರೆಸ್ ಬಗ್ಗೆಯೂ ಅತೃಪ್ತಿ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕರ ವಿರುದ್ದ ಮತ್ತೆ ಕಿಡಿಕಾರಿದ್ದಾರೆ. 
ರಮೇಶ್ ಜಾರಕಿಹೊಳಿ ಅವರ ಸಪ್ತ ಸಚಿವರ ನಿವಾಸಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮೇಲೆ ಈಗಲೂ ಅಸಮಾಧಾನ ಇದೆ. ಆದರೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿಲ್ಲ. ಈ ಅಸಮಾಧಾನಕ್ಕೆ ತಾವೇ ಕಾರಣ ಎಂದರು. 
ಈ ಬಗ್ಗೆ ಪಕ್ಷದ ವರಿಷ್ಠರು ಹಾಗೂ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರಿಗೆ ಎಲ್ಲವನ್ನೂ ವಿವರಿಸಿದ್ದೇನೆ. ಮುಖ್ಯಮಂತ್ರಿ ಅವರ ಬಗ್ಗೆ ತಮಗೆ ಬೇಸರವಿಲ್ಲ. ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆಗಿನ ಸಂಬಂಧ ತುಂಬಾ ಹಳೆಯದು ಎಂದರು.
ಸದ್ಯಕ್ಕೆ ಹೆಚ್ಚಿಗೆ ಏನೂ ಮಾತನಾಡುವುದಿಲ್ಲ. ಮುಂದೆ ಏನಾಗಲಿದೆ ನೋಡೋಣ ಎಂದ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿ ಅವರ ಜೊತೆ ಎರಡು-ಮೂರು ತಿಂಗಳ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ. ಜಿಲ್ಲೆ, ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಿಲ್ಲ. ಆದರೆ ಬಳ್ಳಾರಿ ಹಾಗೂ ಬೆಳಗಾವಿ ರಾಜಕಾರಣದ ಬಗ್ಗೆ ಚರ್ಚಿಸಲಾಗಿದೆ ಎಂದು  ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ದ ಬೇಸರ ವ್ಯೆಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಕುಮಾರಸ್ವಾಮಿ ತಮ್ಮನ್ನು ಮನವೊಲಿಸಲು ಬಂದಿಲ್ಲ. ಮುಖ್ಯಮಂತ್ರಿ ಅವರ ಜೊತೆ ರಾಜಕೀಯಕ್ಕಿಂತ ಜಿಲ್ಲೆಯ ಅಭಿವೃದ್ದಿ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಗಿದೆ ಎಂದರು.
ಮಾಧ್ಯಮಗಳಲ್ಲಿ ತಮ್ಮನ್ನು ಅತೃಪ್ತರು ಎಂದು ಪದೇ ಪದೇ ಬಿಂಬಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ ನಾಗೇಂದ್ರ, ತಮಗೆ ಅಸಮಾಧಾನವಿರುವುದು ನಿಜ, ಆದರೆ ತಾವು ಅತೃಪ್ತರಲ್ಲ. ನಮ್ಮ‌ ಅಸಮಾಧಾನ ಸದ್ಯಕ್ಕೆ ಶಮನವಾಗಿದೆ. ತಾವೆಲ್ಲಾ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಹಂತಕ್ಕೆ ಹೋಗಿಲ್ಲ. ಚಿಂಚೋಳಿ ಶಾಸಕರ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಉಮೇಶ್ ಜಾಧವ್ ಗೂ ತಮ್ಮ ವಿಚಾರಕ್ಕೂ ಸಂಬಂಧವಿಲ್ಲ ಎಂದರು.
ನಾಗೇಂದ್ರ ಸಹೋದರನಿಗೆ ಬಿಜೆಪಿ ಟಿಕೆಟ್ ನೀಡುವ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ಸಹೋದರನಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿಲ್ಲ. ಕಳೆದ ಬಾರಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದೆವು. ತಮ್ಮ ಪಕ್ಷಕ್ಕೆ ಬಂದರೆ ಟಿಕೆಟ್ ಕೊಡುತ್ತೇವೆ ಎಂದು ಬಿಜೆಪಿಯವರು ಹೇಳಿರಬಹುದು. ಸ್ಪರ್ಧೆಗೆ ತಮ್ಮ ಸಹೋದರ ಅರ್ಹನಿದ್ದು, ನಿರ್ಧಾರ ಕೈಗೊಳ್ಳಲು ಸ್ವತಂತ್ರನಿದ್ದಾನೆ. ಅವರ ತೀರ್ಮಾನಕ್ಕೆ ತಾವು ಅಡ್ಡಿ ಬರುವುದಿಲ್ಲ ಎಂದು ಬಿ.ನಾಗೇಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.