ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿಜೆಪಿ ಸೇರ್ಪಡೆ ನಂತರ ಉಮೇಶ್ ಜಾಧವ್
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನನ್ನ ಕನಸು, ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡಿದ್ದೇನೆ, ಬಿಜೆಪಿ ಪಕ್ಷ ನನ್ನನ್ನು ...

Published On :
ಕಲಬುರಗಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನನ್ನ ಕನಸು, ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡಿದ್ದೇನೆ, ಬಿಜೆಪಿ ಪಕ್ಷ ನನ್ನನ್ನು ಒಳ್ಳೆಯ ರೀತಿಯಲ್ಲಿ ಬರಮಾಡಿಕೊಂಡಿದ್ದಾರೆ, ಬಹಳ ಸಂತೋಷದಿಂದ ಬಿಜೆಪಿ ಸೇರಿದ್ದೇನೆ ಎಂದು ಬಿಜೆಪಿ ಸೇರಿರುವ ಉಮೇಶ್ ಜಾಧವ್ ಪ್ರತಿಕ್ರಿಯಿಸಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಪಕ್ಷದ ಚಿಹ್ನೆಯುಳ್ಳ ಶಾಲು ಹೊದಿಸಿ, ಹಾರ ಹಾಕಿ ಜಾಧವ್ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಪ್ರಧಾನಿ ನರೇಂದ್ರ ಮೋದಿ, ಕಲಬುರಗಿ ಸಮಾವೇಶಕ್ಕೆ ತೆರಳಲು ಬೀದರ್ ಏರ್‌ಬೇಸ್‌ಗೆ ಆಗಮಿಸಿದ್ದಾರೆ. ಬೆಳಿಗ್ಗೆ 11 ಗಂಟೆ ವೇಳೆಗೆ ಅವರು ಬೀದರ್ ತಲುಪಿದ್ದು, ರಾಜ್ಯಪಾಲ ವಜೂಬಾಯ್ ವಾಲಾ ಪ್ರಧಾನಿಯನ್ನು ಸ್ವಾಗತಿಸಿ ಬರಮಾಡಿಕೊಂಡರು. ಬೀದರ್‌ನಿಂದ ಹೆಲಿಕಾಫ್ಟರ್ ಮೂಲಕ ಕಲಬುರುಗಿಗೆ ಪ್ರಧಾನಿ ಆಗಮಿಸಿದ್ದಾರೆ.
ಕಲಬುರುಗಿಯಲ್ಲಿ ಆಯುಷ್ಮಾನ್ ಭಾರತ್ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಪ್ರಧಾನಿ, ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲ್ಲಿದ್ದಾರೆ. ರಾಜ್ಯದ ಹಲವೆಡೆ 6 ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್ಸೇರ್ಪಡೆbjpಬಿಜೆಪಿಕಲಬುರಗಿkalaburagijoinUmesh jadhavಉಮೇಶ್ ಜಾಧವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


