ಗಂಡ ಸತ್ತು ತಿಂಗಳು ಆಗಿಲ್ಲ, ಆಗಲೆ ರಾಜಕೀಯಕ್ಕೆ ಬಂದಿದ್ದಾರೆ: ಸುಮಲತಾ ವಿರುದ್ಧ ರೇವಣ್ಣ ಅವಮಾನಕಾರಿ ಹೇಳಿಕೆ
ಗಂಡ ಸತ್ತು ತಿಂಗಳಾಗಿಲ್ಲ, ಆಗಲೇ ಸುಮಲತಾ ಅಂಬರೀಷ್ ರಾಜಕೀಯಕ್ಕೆ ಬಂದಿದ್ದಾರೆ ಎಂದು ಸಚಿವ ಎಚ್.ಡಿ ರೇವಣ್ಣ ಅವಮಾನಕಾರಿ ಹೇಳಿಕೆ ನೀಡಿದ್ದಾರೆ....

Published On :
ಬೆಂಗಳೂರು: ಗಂಡ ಸತ್ತು ತಿಂಗಳಾಗಿಲ್ಲ, ಆಗಲೇ ಸುಮಲತಾ ಅಂಬರೀಷ್ ರಾಜಕೀಯಕ್ಕೆ ಬಂದಿದ್ದಾರೆ ಎಂದು ಸಚಿವ ಎಚ್.ಡಿ ರೇವಣ್ಣ ಅವಮಾನಕಾರಿ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ, ಸುಮಲತಾ ಅವರು ಚಾಲೆಂಜ್ ಮಾಡಿದ್ದರಿಂದ ನಾವು ನಿಖಿಲ್ ಕುಮಾರ್ ನನ್ನು ಕಣಕ್ಕಿಳಿಸಬೇಕಾಯಿತು, ಇದಲ್ಲದಿದ್ದರೇ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುತ್ತಿರುವುದು ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.
ಇನ್ನೂ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ, ಅವರ ಮಾತುಗಳು ಅವರ ಸಂಸ್ಕಾರವನ್ನು ಬಿಂಬಿಸುತ್ತದೆ. ನಾವು ಯಾವುತ್ತೂ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ,
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೇಲೆ ಅಪಾರ ವಿಶ್ವಾಸವಿದೆ. ಹೀಗಾಗಿ ರೇವಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ, ಜನರೇ ಅಂತಿಮಾ ತೀರ್ಮಾನ ಮಾಡುತ್ತಾರೆ. ಎಲ್ಲರು ಒಂದೇ ರೀತಿ ಇರುವುದಿಲ್ಲ, ಅಂಬರೀಶ್ ಎಲ್ಲರನ್ನು ಪ್ರೀತಿಯಿಂದ ನೋಡುತ್ತಿದ್ದರು ಎಂದು ಸುಮಲತಾ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲೋಕಸಭೆ ಚುನಾವಣೆSumalathaಸುಮಲತಾH.d Revannamandya lokasabha pollsderogatory statement ಎಚ್.ಡಿ ರೇವಣ್ಣಅವಮಾನಕಾರಿ ಹೇಳಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


