ಕೊನೆ ಕ್ಷಣದವರೆಗೂ ಕಾಂಗ್ರೆಸ್ ಟಿಕೆಟ್‍ಗೆ ಕಾಯುತ್ತೇನೆ: ಸಮಲತಾ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿಶ್ಚಯಿಸಿರುವ ಮಾಜಿ ಸಚಿವ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಅಂಬರೀಶ್ ಅವರು...

Published On :
ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿಶ್ಚಯಿಸಿರುವ ಮಾಜಿ ಸಚಿವ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಅಂಬರೀಶ್ ಅವರು, ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಟಿಕೆಟ್‍ಗಾಗಿ ಕಾಯುವುದಾಗಿ ಶುಕ್ರವಾರ ಹೇಳಿದ್ದಾರೆ.
ಒಂದು ವೇಳೆ ಕಾಂಗ್ರೆಸ್ ಟಿಕೆಟ್ ನೀಡದಿದ್ದ ಪಕ್ಷದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಸುಮಲತಾ ಸ್ಪಷ್ಟಪಡಿಸಿದ್ದಾರೆ.
ಇಂದು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, "ಟಿಕೆಟ್ ಗಾಗಿ ಯಾರನ್ನೂ ಭೇಟಿಯಾಗಿಲ್ಲ. ರಾಜಕೀಯಕ್ಕೆ ಹೊಸಬಳಾದ ಕಾರಣ, ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕಾಗಿದೆ. ಸಾಮಾಜಿಕ ಜಾಲತಾಣಗಳು ನನ್ನ ನಿಯಂತ್ರಣದಲ್ಲಿಲ್ಲ. ಆದರೆ ಯಾರಿಗೂ ನೋವಾಗುವಂತಹ ಹೇಳಿಕೆಯನ್ನು ನಾನು ನೀಡಿಲ್ಲ" ಎಂದರು.
ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿರೋಧಿಸಿ ಜಾಲತಾಣಗಳಲ್ಲಿ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, "ಇಂದು ವಿಶ್ವ ಮಹಿಳಾ ದಿನ. ತಾಯಿಗಿಂತ ದೊಡ್ಡದಾದುದು ಪ್ರಪಂಚದಲ್ಲಿ ಬೇರಾವುದೂ ಇಲ್ಲ. ತಾಯಿಗೆ ನೋವಾಗುವಂತಹ ಚರ್ಚೆಗಳು ನಡೆಯುವುದು ಬೇಡ. ನಿಖಿಲ್ ಕುಮಾರಸ್ವಾಮಿಯನ್ನು ನಿಂದಿಸುವುದು ಸರಿಯಲ್ಲ, ಒಬ್ಬ ಮಗನ ತಾಯಿಯಾಗಿ ಈ ಮನವಿ ಮಾಡಿಕೊಳ್ಳುತ್ತಿರುವೆ" ಎಂದು ಹೇಳಿದರು.
ಮಂಡ್ಯದ ಜನರು ತಮ್ಮನ್ನು ಮನೆ ಮಗಳಂತೆ ಕಾಣುತ್ತಿದ್ದಾರೆ ಎಂದು ತಿಳಿಸಿದ ಸುಮಲತಾ, ಲೋಕಸಭಾ ಚುನಾವಣೆ ದೃಷ್ಟಿಯಿಂದ ಅನೇಕ ಜನರನ್ನು ಭೇಟಿ ಮಾಡಿದ್ದು, ಬೆಂಬಲ ನೀಡಲು ಸಾಕಷ್ಟು ಜನರು ತಾವಾಗಿಯೇ ಮುಂದೆ ಬಂದಿದ್ದಾರೆ. ಇದರಿಂದ ಅತ್ಯಂತ ಸಂತೋಷವಾಗಿದೆ. ಇನ್ನು, ತಾಯಿ ಚಾಮುಂಡೇಶ್ವರಿಯ ದರ್ಶನದಿಂದ ಮನಸ್ಸಿಗೆ ಶಾಂತಿ ದೊರೆತಂತಾಗಿದ್ದು, ಬಾಲ್ಯದಿಂದಲೂ ಈ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


