ಸುಮಲತಾ ಮನವೊಲಿಸಲು ಯಾರು ನನಗೆ ಹೇಳಿಲ್ಲ: ಡಿ.ಕೆ. ಶಿವಕುಮಾರ್
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಣತೊಟ್ಟಿರುವ ಸುಮಲತಾ ಅಂಬರೀಷ್ ಅವರ ಮನವೊಲಿಸುವಂತೆ ಯಾರೂ ನನಗೆ ಹೇಳಿಲ್ಲ. ಆದರೆ, ಅವರು ಕಾಂಗ್ರೆಸ್ ..

Published On :
ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಣತೊಟ್ಟಿರುವ ಸುಮಲತಾ ಅಂಬರೀಷ್ ಅವರ ಮನವೊಲಿಸುವಂತೆ ಯಾರೂ ನನಗೆ ಹೇಳಿಲ್ಲ. ಆದರೆ, ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎನ್ನುವ ನಂಬಿಕೆ ಇದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮಂಡ್ಯ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ ಎಂದು ಹೇಳಿದರು.
ಇನ್ನೂ ಸುಮಲತಾ ಸ್ಪರ್ಧೆ ಸಂಬಂಧ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ರೇವಣ್ಣ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಅವರು ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ ಮಾತನಾಡುತ್ತೇನೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನೆ ಕೇಳಿ ಎಂದು ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ರಾಜಕೀಯಮಂಡ್ಯMandyaಲೋಕಸಭೆ ಚುನಾವಣೆLok Sabha pollsಡಿಕೆ ಶಿವಕುಮಾರ್SumalathaಸುಮಲತಾD.k Shivakumar. politics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


