ಭಾರತಕ್ಕಿಂತ, ಪಾಕಿಸ್ತಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗೆ ಹೆಚ್ಚು ಆಸಕ್ತಿ: ಮರುಳಿಧರರಾವ್
ರಾಹುಲ್ ಗಾಂಧಿಯವರಿಗೆ ಭಾರತೀಯ ಮಾಧ್ಯಮಗಳಲ್ಲಿ ಪ್ರಚಾರ ಸಿಗುತ್ತಿಲ್ಲ. ಆದರೆ ಪಾಕಿಸ್ತಾನದ ಮಾಧ್ಯಮದಲ್ಲಿ ರಾಹುಲ್ ಹೆಚ್ಚಾಗಿ ಪ್ರಚಾರ ಪಡೆಯುತ್ತಿದ್ದಾರೆ...

Published On :
ಹುಬ್ಬಳ್ಳಿ: ರಾಹುಲ್ ಗಾಂಧಿಯವರಿಗೆ ಭಾರತೀಯ ಮಾಧ್ಯಮಗಳಲ್ಲಿ ಪ್ರಚಾರ ಸಿಗುತ್ತಿಲ್ಲ. ಆದರೆ ಪಾಕಿಸ್ತಾನದ ಮಾಧ್ಯಮದಲ್ಲಿ ರಾಹುಲ್ ಹೆಚ್ಚಾಗಿ ಪ್ರಚಾರ ಪಡೆಯುತ್ತಿದ್ದಾರೆ. ರಾಹುಲ್ ದೇಶ ಮತ್ತು ಸೈನ್ಯದ ವಿರೋಧಿ ಹೇಳಿಕೆ ನೀಡಿ ಪಾಕಿಸ್ತಾನದ ಮಾಧ್ಯಮದಲ್ಲಿ ಪ್ರಚಾರ ಪಡೆಯುತ್ತಿದ್ದಾರೆ, ಭಾರತಕ್ಕಿಂತ ಹೆಚ್ಚಾಗಿ ಪಾಕಿಸ್ತಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಗೆ ತುಂಬಾ ಆಸಕ್ತಿ ಯಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳಿಧರ ರಾವ್ ಟೀಕಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಜನರ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಪ್ರಧಾನಿ ಕೊಲೆ ಮಾಡುವಂತೆ ಹೇಳುತ್ತಿದ್ದಾರೆ. ಹಿಂದೂಗಳ ನಂಬಿಕೆ ಮತ್ತು ಆಚಾರ ವಿಚಾರದ ಮೇಲೆ ಕಾಂಗ್ರೆಸ್ ಸವಾರಿ ಮಾಡುತ್ತಿದೆ. ಹಿಂದುಗಳ ಕುಂಕುಮವನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಹಾಗೂ ಕಾಂಗ್ರೆಸ್ ನಾಯಕರಿಗೆ ಆಗಲ್ಲ. ಅವರಿಗೆ ಟಿಪ್ಪು ಹಾಗೂ ಬಾಬರ್ ಅವರು ಬೇಕು ಎಂದು ಲೇವಡಿ ಮಾಡಿದರು.
ನಾವು ಈ ಬಾರಿ ನಮ್ಮ ಸರ್ಕಾರ ಮಾಡಿದ ಸಾಧನೆ ಇಟ್ಟುಕೊಂಡು ಜನರ ಬಳಿ ಹೋಗುತ್ತಿದ್ದೇವೆ. ಈ ಬಾರಿ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳಿಧರ ರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಕಿಲ್ ಮೋದಿ, ಪುಲ್ವಾಮ ಮ್ಯಾಚ್ ಫಿಕ್ಸಿಂಗ್ ನಂತಹ ಹೇಳಿಕೆ ನೀಡುತ್ತಿದ್ದರೂ ಪಕ್ಷ ಯಾವುದೇ ಶಿಸ್ತುಕ್ರಮ ಜರುಗಿಸಿಲ್ಲ, ಹೀಗಾಗಿ ರಾಹುಲ್ ಗಾಂಧಿ ಕೂಡ ಹೇಟ್ ಮೋದಿ ಕ್ಯಾಂಪೇನ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ಹಿಂಧೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ನೀಡುತ್ತಿದ್ದಾರೆ, ಇದು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


