ಬೆಂಗಳೂರು ದಕ್ಷಿಣದಲ್ಲಿ ಮಹಿಳಾ ಮಣಿಯರ ಮುಖಾಮುಖಿ: ರೋಹಿಣಿ- ತೇಜಸ್ವಿನಿ ನಡುವೆ ಬಿಗ್ ಫೈಟ್?
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ...

Published On :
ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ವತಿಯಿಂದ ಇಬ್ಬರು ಮಹಿಳಾಮಣಿಯರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿ ಗೋಚರಿಸುತ್ತಿದೆ.
ತಂತ್ರಕ್ಕೆ ಪ್ರತಿತಂತ್ರ ಎಂಬ ನೀತಿಯನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಅನುಸರಿಸಲು ಮುಂದಾಗಿವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಅನಂತ್‌ಕುಮಾರ್ ಅವರು ಆರು ಬಾರಿ ಪ್ರತಿನಿಧಿಸಿದ್ದರು. ಅವರ ಅಕಾಲಿಕ ನಿಧನದಿಂದ ಕ್ಷೇತ್ರ ತೆರವಾಗಿದ್ದು ಅವರ ಪತ್ನಿ ತೇಜಸ್ವಿನಿ ಅನಂತ್‌ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಬಿಜೆಪಿ ತೇಜಸ್ವಿನಿ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಕೂಡ ನಂದನ್ ನೀಲಖೇಣಿ ಪತ್ನಿ ರೋಹಿಣಿ ನೀಲಖೇಣಿ ಅವರನ್ನು ಕಣಕ್ಕಿಳಿಸಲು ಗಂಭೀರ ಚಿಂತನೆ ಮಾಡಿದೆ. ಈ ಸಂಬಂಧ ಈಗಾಗಲೇ ರೋಹಿಣಿ ನೀಲಖೇಣಿ ಅವರನ್ನು ಹಿರಿಯ ನಾಯಕರು ಸಂಪರ್ಕ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ . ಇಬ್ಬರು ಮಹಿಳಾಮಣಿಯರ ಜೊತೆಗೆ ಮಾಜಿ ಶಾಸಕ ಪ್ರಿಯಾಕೃಷ್ಣ ಹೆಸರೂ ಕೂಡ ಹರಿದಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressbjpPoliticsRohini Nilekaniರೋಹಿಣಿ ನಿಲೇಕಣಿಬಿಜತೇಜಸ್ವಿನಿ ಅನಂತ್ ಕುಮಾರ್Tejaswini AnanthkumarBengaluru South Loksabha constituencyಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


