ರಾಜಕೀಯ

ಮಾರ್ಚ್ 18 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಗಾಗಿ ಸುಮಲತಾ ಅಂಬರೀಷ್ ಅವರು ನಡೆಸುತ್ತಿರುವ ಪ್ರಯತ್ನ ಫಲ ಕೊಡದಿರುವ...

ಮಾರ್ಚ್ 18 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್
ಸುಮಲತಾ ಅಂಬರೀಷ್
Published On :
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಗಾಗಿ ಸುಮಲತಾ ಅಂಬರೀಷ್ ಅವರು ನಡೆಸುತ್ತಿರುವ ಪ್ರಯತ್ನ ಫಲ ಕೊಡದಿರುವ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕೆ ಅಥವ ಬೇಡವೇ ಎಂಬ ಬಗ್ಗೆ ಇದೇ ಮಾರ್ಚ್ 18ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ  ಕನ್ನಡ ಚಲನಚಿತ್ರರಂಗ ತಮಗೆ ಬೆಂಬಲ ವ್ಯಕ್ತಪಡಿಸಿದ್ದು, ಕ್ಷೇತ್ರದ್ಯಾಂತ ತಮಗೆ ನೈತಿಕ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು. 
ಕಾಂಗ್ರೆಸ್ ಕೆಲವು ಹಿರಿಯ ನಾಯಕರು ತಮಗೆ ಬೆಂಬಲ ವ್ಯಕ್ತಪಡಿಸಿದ್ದರೂ, ಪಕ್ಷ ತಮಗೆ ಟಿಕೆಟ್ ನಿರಾಕರಿಸಿದೆ ಎಂದು ತಿಳಿಸಿದರು.
ಇತ್ತೀಚಿಗೆ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಾವು ನಡೆಸಿದ ಸಭೆ ಕುರಿತು ಮಾತನಾಡಿದ ಅವರು, ಡಿಕೆ ಶಿವಕುಮಾರ್ ತಮ್ಮ ಮೇಲೆ ಯಾವುದೇ ಒತ್ತಡ ಹೇರಲಿಲ್ಲ. ಮೈತ್ರಿ ಕೂಟದ ಹೊಂದಾಣಿಕೆ ಸೂತ್ರ ಕಾಪಾಡಬೇಕಿದೆ. ಬೇರೊಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಎಂದು ಸಲಹೆ ನೀಡಿದರು ಆದರೆ ತಮ್ಮ ಮೇಲೆ ಅವರು ಯಾವುದೇ ಒತ್ತಡ ಹೇರಲಿಲ್ಲ, ತಾವು ಚುನಾವಣೆಗೆ ಸ್ಪರ್ಧಿಸಿದರೆ ಮಂಡ್ಯದಿಂದ ಮಾತ್ರ ಎಂದು ಸ್ಪಷ್ಟಪಡಿಸಿರುವುದಾಗಿ ಸುಮಲತಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.