ದೋಸ್ತಿಗಳ ಸೀಟು ಹಂಚಿಕೆ ಅಂತಿಮ: ಕಾಂಗ್ರೆಸ್ 20, ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ; 'ಕೈ'ತಪ್ಪಿದ ತುಮಕೂರು
ಹಲವು ದಿನಗಳಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ.

ಬೆಂಗಳೂರು: ಹಲವು ದಿನಗಳಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗಳಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ರಾಜ್ಯದಲ್ಲಿನ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ.
ಆದಾಗ್ಯೂ, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ ಹಾಗೂ ವಿಜಯಪುರ, ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಎಷ್ಟು ಸೀಟು ಹೊಂದಾಣಿಕೆ ಆಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೇ 15 ರಂದು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ ಕೆಲ ತಾಸುಗಳಲ್ಲೇ ಸೀಟು ಹೊಂದಾಣಿಕೆ ಪಟ್ಟಿ ಬಿಡುಗಡೆಯಾಗಿದೆ.
ಆರಂಭದಿಂದಲೂ 12 ಕ್ಷೇತ್ರಗಳಿಗೆ ಸ್ಪರ್ಧಿಸುವುದಾಗಿ ಹೇಳುತ್ತಾ ಬಂದಿದ್ದ ಜೆಡಿಎಸ್ ನಂತರ 10 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕಾಂಗ್ರೆಸ್ ಮೇಲೆ ಒತ್ತಡ ಹೇರಿತ್ತು. ಅದರಲ್ಲೂ ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಿಗೆ ಪಟ್ಟು ಹಿಡಿದಿತ್ತು. ಈ ವಿಚಾರದಲ್ಲಿ ಉಭಯ ಪಕ್ಷಗಳಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ಸುತ್ತಿನ ಸಭೆ ನಡೆಸಲಾಗಿತ್ತು.
ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮೈಸೂರು ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ತುಮಕೂರು ಕೈ ಪಡೆಯಿಂದ ಜಾರಿದ್ದು, ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಇದರಿಂದಾಗಿ ಈ ಕ್ಷೇತ್ರದ ಹಾಲಿ ಸಂಸದ ಮುದ್ದ ಹನುಮೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


