ಪ್ರಜ್ವಲ್ ಗೆ ಹಾಸನ ಬಿಟ್ಟು ಕೊಟ್ಟ ದೇವೇಗೌಡ: ವೇದಿಕೆಯಲ್ಲೇ ಅಪ್ಪ-ಮಗ-ಮೊಮ್ಮಗನ ಕಣ್ಣೀರು!
ನಾನು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬುಧವಾರ ಅಧಿಕೃತವಾಗಿ ..

Published On :
ಹಾಸನ: ನಾನು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬುಧವಾರ ಅಧಿಕೃತವಾಗಿ ಘೋಷಿಸುವ ಮೂಲಕ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ತಮ್ಮ ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದಾರೆ.
ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಿಂದ ಜೆಡಿಎಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಅವರು ಮೂಡಲಹಿಪ್ಪೆ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯಕ್ಕೆ ಮೊಮ್ಮಗ ಪ್ರಜ್ವಲ್ ರೇವಣ್ಣ, ಪುತ್ರ ರೇವಣ್ಣ, ಸೊಸೆ ಭವಾನಿ ರೇವಣ್ಣ, ಪಕ್ಷದ ಶಾಸಕರ ಜೊತೆ ಆಗಮಿಸಿ ನಾಮಪತ್ರವನ್ನು ಇಟ್ಟು ಪೂಜೆ ಸಲ್ಲಿಸಿದರು.
ಮೂಡಲಹಿಪ್ಪೆಯ ಚನ್ನಕೇಶವ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ತೆರದ ವಾಹನದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಅಭ್ಯರ್ಥಿ ಪ್ರಜ್ವಲ್, ಸಚಿವ ರೇವಣ್ಣ ದಂಪತಿ ಪ್ರಚಾರ ನಡೆಸಿದರು.
ಬಳಿಕ ಮೂಡಲಹಿಪ್ಪೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ದೇವೇಗೌಡರು, ಮೊಮ್ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮದೇ ಎಂದು ಹೇಳಿದರು.
ಈ ವೇಳೆ ದೇವೇಗೌಡ, ಶಾಸಕ ಬಾಲಕೃಷ್ಣ, ಸಚಿವ ಎಚ್.ಡಿ. ರೇವಣ್ಣ ಅವರು ಭಾವೋದ್ವೇಗಕ್ಕೆ ಒಳಗಾಗಿ ಗದ್ಗದಿತರಾಗಿ ಕಣ್ಣೀರು ಹಾಕಿದರು.
ಭಾವನಾತ್ಮಕ ಭಾಷಣ ಮಾಡಿದ ಗೌಡರು, ತಮ್ಮನ್ನು ಪುತ್ರ ವ್ಯಾಮೋಹಿ ಎನ್ನುತ್ತಾರೆ. ಮಕ್ಕಳು ಮತ್ತು ಕುಟುಂಬಕ್ಕಾಗಿ ಕೆಲಸ ಮಾಡುವುದಾಗಿ ಆರೋಪಿಸುತ್ತಾರೆ. ಆದರೆ ನಾನು ಯಾರಿಗೆ ಮೋಸ ಮಾಡಿದ್ದೇನೆ ನೀವೆ ಹೇಳಿ ಎಂದು ಪ್ರಶ್ನಿಸಿ ಕಣ್ಣೀರು ಹಾಕಿದರು. ಆಗ ಪ್ರಜ್ವಲ್ ರೇವಣ್ಣ ಅವರ ಕಣ್ಣಲ್ಲೂ ಕಣ್ಣೀರು ಜಿನುಗಿತು.
ಪ್ರಜ್ವಲ್ ರೇವಣ್ಣ ಅವರನ್ನು ಅಭ್ಯರ್ಥಿ ಮಾಡುವ ತೀರ್ಮಾನ ತಮ್ಮದಲ್ಲ. ಕ್ಷೇತ್ರದ ಕಾರ್ಯಕರ್ತರು ಮತ್ತು ನಾಯಕರ ಒತ್ತಾಸೆಯ ಮೇರೆಗೆ ಅಭ್ಯರ್ಥಿಯಾಗಿ ಪ್ರಕಟಿಸಲಾಗಿದೆ. ನಿಮ್ಮ ಅಪೇಕ್ಷೆಯಂತೆ ನನ್ನ ಮೊಮ್ಮಗನನ್ನು ಕಣಕ್ಕಿಳಿಸಿದ್ದೇನೆ. ಇದರಲ್ಲಿ ಯಾವ ಸ್ವಾರ್ಥವಿದೆ ಎಂದರು.
ಪ್ರಜ್ವಲ್ ಅಭ್ಯರ್ಥಿಯಾದರೆ ನಮ್ಮವರು ಬೇರೆ ಪಕ್ಷಕ್ಕೆ ಹೋಗುತ್ತೇವೆ ಎಂದು ಬೆದರಕೆ ಹಾಕುತ್ತಾರೆ. ಆದರೆ ನಿಮ್ಮೆಲ್ಲರ ಆಶಯದಂತೆ ನನ್ನ ಮೊಮ್ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಆಶಿರ್ವಾದ ಮಾಡಿ ಎಂದರು.
ಇದಕ್ಕೂ ಮುನ್ನ ಶಾಸಕ ಬಾಲಕೃಷ್ಣ ಮಾತನಾಡಿ, ಇದು ತಮ್ಮ ಕೊನೆಯ ಲೋಕಸಭಾ ಚುನಾವಣೆ ಎಂದು ದೇವೇಗೌಡರು ನೀಡಿರುವ ಹೇಳಿಕೆಯನ್ನು ನೆನೆದು ಕಣ್ಣೀರು ಸುರಿಸಿದರು. ಇದನ್ನು ನೋಡಿ ರೇವಣ್ಣ ಅವರು ಟವೆಲ್ ನಿಂದ ಕಣ್ಣೀರು ಒರೆಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


