ರಾಜಕೀಯ

ದೇವೇಗೌಡರು ರೇವಣ್ಣರಿಂದ ಕ್ಷಮೆ ಕೇಳಿಸಲಿ ಇಲ್ಲವೇ ಜೆಡಿಎಸ್ ಪಕ್ಷದ ಚಿಹ್ನೆ ಬದಲಿಸಲಿ: ಈಶ್ವರಪ್ಪ ಆಗ್ರಹ

ನಟಿ ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಕ್ಷಮೆ ಕೇಳಬೇಕು ..

ದೇವೇಗೌಡರು ರೇವಣ್ಣರಿಂದ ಕ್ಷಮೆ ಕೇಳಿಸಲಿ ಇಲ್ಲವೇ ಜೆಡಿಎಸ್ ಪಕ್ಷದ ಚಿಹ್ನೆ ಬದಲಿಸಲಿ: ಈಶ್ವರಪ್ಪ ಆಗ್ರಹ
ಕೆ.ಎಸ್ ಈಶ್ವರಪ್ಪ
Published On :
ಮೈಸೂರು:  ನಟಿ ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಕ್ಷಮೆ ಕೇಳಬೇಕು ಇಲ್ಲವೇ ಜೆಡಿಎಸ್ ಪಕ್ಷದ ಚಿಹ್ನೆಯನ್ನು ಬದಲಿಸಿ ಯಾವುದಾದರೂ ಪ್ರಾಣಿಯ ಚಿಹ್ನೆಯನ್ನು ಇಟ್ಟುಕೊಳ್ಳಬೇಕೆಂದು ರಾಜ್ಯ ಬಿಜೆಪಿ ನಾಯಕ, ಶಾಸಕ ಕೆ.ಎಸ್.ಈಶ್ವರಪ್ಪ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಆಗ್ರಹಿಸಿದ್ದಾರೆ. 
ಮೈಸೂರಿನಲ್ಲಿ ಮಾತನಾಡಿದ ಈಶ್ವರಪ್ಪ ಜೆಡಿಎಸ್‌ನವರು ತೆನೆ ಹೊತ್ತ ಮಹಿಳೆ ಚಿಹ್ನೆ ಹೊಂದಿದ್ದಾರೆ. ಆದರೆ ಅವರು ಮಹಿಳೆಯರ ಬಗ್ಗೆ ಅಗೌರವದಿಂದ ಮಾತಾಡುತ್ತಿದ್ದಾರೆ. ಸಹೋದರಿ ಸುಮಲತಾ ಅವರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದ್ದಾರೆ. ರೇವಣ್ಣ ಇದುವರೆಗೂ ಕ್ಷಮೆ ಕೇಳಿಲ್ಲ. ಅವರ ಬದಲಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್, ಸಿಎಂ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಕ್ಷಮೆ ಕೇಳಿದ್ದಾರೆ. ರೇವಣ್ಣ ಅವರಿಂದ ಈ ಕೂಡಲೇ ಕ್ಷಮೆ ಕೇಳಿಸಬೇಕೆಂದು ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ರೇವಣ್ಣ ಬಳಿ ಕ್ಷಮೆ ಕೋರಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.