ತುಮಕೂರು ಅಥವಾ ಬೆಂಗಳೂರು ಉತ್ತರ ಯಾವುದು ಸೇಫ್: ಕ್ಷೇತ್ರ ಆಯ್ಕೆಯ ಗೊಂದಲದಲ್ಲಿ ದೇವೇಗೌಡರು
ದಶಕಗಳ ಕಾಲ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಕ್ಷೇತ್ರ...

Published On :
ಬೆಂಗಳೂರು: ದಶಕಗಳ ಕಾಲ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಕ್ಷೇತ್ರ ಬಿಟ್ಟುಕೊಟ್ಟ ನಂತರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಚುನಾವಣೆಯಲ್ಲಿ ಸ್ಪರ್ಧಿಸಲು ಸುರಕ್ಷಿತ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಬೆಂಗಳೂರು ಉತ್ತರ ಅಥವಾ ತುಮಕೂರು ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸಲಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ.
ನಿನ್ನೆ ಘೋಷಣೆಯಾದ ಸೀಟು ಹಂಚಿಕೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಗೆ 8 ಕ್ಷೇತ್ರಗಳು ಮತ್ತು ಕಾಂಗ್ರೆಸ್ ಗೆ 20 ಕ್ಷೇತ್ರಗಳು ಸಿಕ್ಕಿವೆ. ಮೂಲಗಳಿಂದ ತಿಳಿದುಬಂದಿರುವ ಪ್ರಕಾರ ಬೆಂಗಳೂರು ಉತ್ತರ ಕ್ಷೇತ್ರ ದೇವೇಗೌಡರಿಗೆ ಅಷ್ಟು ಸುರಕ್ಷಿತವಲ್ಲ, ಹೀಗಾಗಿ ತುಮಕೂರಿನಿಂದ ಸ್ಪರ್ಧಿಸಲು ಒಲವು ಹೊಂದಿದ್ದಾರೆ ಎನ್ನಲಾಗಿದೆ. ಇದುವರೆಗೆ ಯಾವುದೇ ನಿರ್ಧಾರವನ್ನು ಅವರು ತೆಗೆದುಕೊಂಡಿಲ್ಲ ಎನ್ನಲಾಗುತ್ತಿದೆ.
ಆದರೆ ಜೆಡಿಎಸ್ ನಾಯಕರು ಹೇಳುವ ಪ್ರಕಾರ ಈ ಎರಡೂ ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ನಿಂತರೆ ದೇವೇಗೌಡರು ಜಯಗಳಿಸುವ ಸಾಧ್ಯತೆಯಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದಲೂ ಅವರು ಸ್ಪರ್ಧಿಸುವುದನ್ನು ಜನ ಬಯಸುತ್ತಿದ್ದಾರೆ ಎನ್ನುತ್ತಾರೆ ಜೆಡಿಎಸ್ ನ ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ ಆರ್.
ಒಕ್ಕಲಿಗ ಮತ್ತು ಅಲ್ಪಸಂಖ್ಯಾತರ ಮತಗಳ ಮೇಲೆ ಜೆಡಿಎಸ್ ಹೆಚ್ಚು ಅವಲಂಬಿತವಾಗಿದ್ದು ವಿಶ್ಲೇಷಕರ ಪ್ರಕಾರ ಬೆಂಗಳೂರು ಉತ್ತರ ದೇವೇಗೌಡರಿಗೆ ಅಷ್ಟೊಂದು ಸುರಕ್ಷಿತ ಕ್ಷೇತ್ರವಲ್ಲ. ಜೆಡಿಎಸ್ ಗೆ ಸಿಕ್ಕಿರುವ 8 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 5,ಜೆಡಿಎಸ್ 2 ಮತ್ತು ಬಿಜೆಪಿ 1 ಕ್ಷೇತ್ರವನ್ನು ಒಳಗೊಂಡಿದೆ. ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸಲು ಮುಂದಾದರೆ ಅವರು ಕಾಂಗ್ರೆಸ್ ನ್ನು ಹೆಚ್ಚು ಅವಲಂಬಿತವಾಗಿರಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


