ರಾಜಕೀಯ

ಅಂಬರೀಷ್ ಅಂತ್ಯಕ್ರಿಯೆ ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು: ಸಿಎಂ ವಿರುದ್ಧ ಸುಮಲತಾ ಗರಂ

ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು ಎಂದು ಸುಮಲತಾ....

ಅಂಬರೀಷ್ ಅಂತ್ಯಕ್ರಿಯೆ ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು: ಸಿಎಂ ವಿರುದ್ಧ ಸುಮಲತಾ ಗರಂ
ಸುಮಲತಾ
Published On :
ಮಂಡ್ಯ: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು ಎಂದು ಸುಮಲತಾ ಅಂಬರೀಷ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಅಂದು ರಕ್ಷಣಾ ಸಚಿವರಿಗೆ ಮನವಿ ಮಾಡಿ ಮಂಡ್ಯಕ್ಕೆ ಪಾರ್ಥಿವ ಶರೀರ ತರಲು ಪ್ರಯತ್ನಿಸಿದ್ದೆ. ಈಗ ಅಂಬರೀಷ್ ಅವರ ಆತ್ಮ ಏನು ಹೇಳುತ್ತದೆ ಯೋಚಿಸಿ? ಆದರೆ ಅಂಬಿ ಅಭಿಮಾನಿಗಳು ನಮ್ಮ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ನನಗೆ ನಿಖಿಲ್ ಬೇರೆಯಲ್ಲ, ಅಂಬರೀಷ್ ಮಗ ಬೇರೆಯಲ್ಲ. ಅಂಬರೀಷ್ ನಿಧನದ ಸುದ್ದಿ ನನಗೆ ಮೊದಲು ನೀಡಿದ್ದೇ ನಿಖಿಲ್ ಎಂದು ಹೇಳಿದ್ದರು.
ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ಅಂಬರೀಷ್ ಅವರ ಅಂತ್ಯಕ್ರಿಯೆ ಬಗ್ಗೆ ಮಾತನಾಡುವುದು ಮತ್ತು ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.