ಮಂಡ್ಯದಿಂದ ಸುಮಲತಾ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿಸುವ ಆಸೆ ಇತ್ತು: ಅವರು ಸಂಧಾನಕ್ಕೆ ಒಪ್ಪಲಿಲ್ಲ: ಡಿ.ಸಿ ತಮ್ಮಣ್ಣ
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿಸುವ ಆಸೆಯಿತ್ತು ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ....

Published On :
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿಸುವ ಆಸೆಯಿತ್ತು ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ.
ಈ ಸಂಬಂಧ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಅವರ ಜೊತೆ ಸಂಧಾನಕ್ಕೆ ನಾನು ಪ್ರಯತ್ನಿಸಿದ್ದೆ, ನಾನು ಮತ್ತು ನನ್ನ ಮಗ ಯತ್ನಿಸಿದ್ದೇವೆ,ಮಧು ಹಾಗೂ ಹೊನ್ನೇಗೌಡ ಎಂಬವರು ಸಂಧಾನ ಮಾಡಿದ್ದರು ಆದರೆ ಸುಮಲತಾ ಅವರೇ ಇದಕ್ಕೆ ಒಪ್ಪಿಕೊಳ್ಳಲಿಲ್ಲ ಎಂದು ಹೇಳಿದ್ದಾರೆ,
ಸುಮಲತಾ ಅವರು ಜೆಡಿಎಸ್ ಟಿಕೆಟ್ ಕೊಡಿಸಿ ಎಂದು ಕೇಳಬಹುದಿತ್ತು, ಆದರೆ ಅವರು ಅದಕ್ಕೆ ಒಲವು ತೋರಲಿಲ್ಲ, ಜೆಡಿಎಸ್ ವರಿಷ್ಠರನ್ನು ಭೇಟಿ ಮಾಡುವ ಆಸಕ್ತಿ ತೋರಲಿಲ್ಲ ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರ ಬಳಿ ಸುಮಲತಾ ಕೇಳಲಿಲ್ಲ, ಅವರು ನಾವು ಸಂಬಂಧಿಗಳು, ಕುಟುಂಬದ ಮಧ್ಯೆ ಭಿನ್ನಾಭಿಪ್ರಾಯ ಬೇಡವೆಂದು ನಾನು ಈ ಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


