ಚಾಮರಾಜನಗರದಿಂದ ಶ್ರೀನಿವಾಸ್ ಪ್ರಸಾದ್ ಕಣಕ್ಕಿಳಿಯುವುದು ಖಚಿತ: ಬಿ.ಎಸ್.ಯಡಿಯೂರಪ್ಪ
ಚಾಮರಾಜನಗರದಲ್ಲಿ ಬಿಜೆಪಿಯಿಂದ ಶ್ರೀನಿವಾಸ ಪ್ರಸಾದ್ ಸ್ಪರ್ಧಿಸುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ...

Published On :
ಬೆಂಗಳೂರು: ಚಾಮರಾಜನಗರದಲ್ಲಿ ಬಿಜೆಪಿಯಿಂದ ಶ್ರೀನಿವಾಸ ಪ್ರಸಾದ್ ಸ್ಪರ್ಧಿಸುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ,
ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಿಂದ ಶ್ರೀನಿವಾಸ್ ಪ್ರಸಾದ್ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮ್ಮಿಶ್ರ ಸರ್ಕಾರ ರಚಿಸುವಾಗಲೇ ಮುಖ್ಯಮಂತ್ರಿ ಮಾಡುವ ಕುರಿತು ತೀರ್ಮಾನಿಸಬೇಕಿತ್ತು. ಅದು ಬಿಟ್ಟು ಇದೀಗ ಈ ವಿಚಾರ ಹೇಳುವ ಮೂಲಕ ಪರಿಶಿಷ್ಟ ಜಾತಿ, ವರ್ಗದ ಮತಗಳನ್ನು ಸೆಳೆಯಲು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಯಡಿಯೂರಪ್ಪ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂದಿ ಅವರು ಖರ್ಗೆ ಅವರಿಗೆ ಮುಖ್ಯಮಂತ್ರಿ ಮಾಡಲು ಒಪ್ಪಿರಲಿಲ್ಲ ಎಂದು ಹೇಳುವ ದೇವೇಗೌಡರಿಗೆ ನಿಜವಾಗಿಯೂ ಬದ್ಧತೆ ಇದ್ದಿದ್ದರೆ 9 ತಿಂಗಳು ಮೊದಲೇ ಜನರಿಗೆ ಈ ವಿಚಾರ ತಿಳಿಸಬಹುದಿತ್ತು. ಇಷ್ಟು ದಿನ ಸುಮ್ಮನಿದ್ದು ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮತಗಳನ್ನು ಸೆಳೆಯಲು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಏನೋ ದೊಡ್ಡ ಉಪಕಾರ ಮಾಡಲು ಹೊರಟಿದ್ದೆ ಎಂದು ತೋರಿಸುವ ನಾಟಕೀಯ ಹೇಳಿಕೆ. ಈ ರೀತಿ ನಾಟಕವಾಡುವ ದೇವೇಗೌಡರನ್ನು ಸಾಮಾನ್ಯ ಜನರು ನಂಬುವುದಿಲ್ಲ ಎಂದು ದೇವೇಗೌಡರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಐಟಿ ದಾಳಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಚುನಾವಣಾ ಕಾರ್ಯಕ್ರಮಗಳಿಗಾಗಿ ದೆಹಲಿಗೆ ಹಣ ಕಳುಹಿಸಲು ಸಂಗ್ರಹಿಸಿದ್ದ ಹಣ ಸಿಕ್ಕಿದೆ. ಇದು ಶೇ. 20ರಷ್ಟು ಕಮಿಷನ್ ಸರ್ಕಾರ ಎಂಬುದು ಇದರಿಂದ ಸಾಬೀತಾಗಿದೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ? ಅಧಿಕಾರಿಗಳೇ ಹೋಟೆಲ್ ನಲ್ಲಿ ರೂಂ ಮಾಡಿಕೊಂಡು ಹಣ ಸಂಗ್ರಹಣೆ ಮಾಡುತ್ತಿದ್ದಾರೆ ಎಂದಾದರೆ ಇವರಿಗೆ ಮಾನ ಮರ್ಯಾದೆ ಇದೆಯಾ? ಎಂದು ಯಡಿಯೂರಪ್ಪ ಪ್ರಶ್ನಿಸಿದರು.
ಅಧಿಕಾರಿಗಳಿಂದ ಹಣ ಸಂಗ್ರಹಣೆ ಆರಂಭ ಆಗಿರುವುದು ಅಕ್ಷಮ್ಯ ಅಪರಾಧ. ಇದಕ್ಕೆ ಸಚಿವ ಕೃಷ್ಣ ಭೈರೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಜವಾಬ್ದಾರರಾಗುತ್ತಾರೆ. ಹಾರಿಕೆ ಉತ್ತರ ಕೊಡದೇ ಕೃಷ್ಣ ಭೈರೇಗೌಡ ಅವರು ಸ್ಪಷ್ಟ ಉತ್ತರ ಕೊಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsರಾಜಕೀಯಯಡಿಯೂರಪ್ಪಚಾಮರಾಜನಗರಲೋಕಸಭೆ ಚುನಾವಣೆಶ್ರೀನಿವಾಸ್ ಪ್ರಸಾದ್YedyurappaChamarajnagarLoksabha PollsShriniavas prasad
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


