ನಾನೂ ಸಹ ಪ್ರಧಾನಿ ಮೋದಿಯಂತೆ, ಆದರೆ ನನಗೆ ಪತ್ನಿ ಇದ್ದಾಳೆ, ಅವರಿಗಿಲ್ಲ: ಚಿಂಚನಸೂರ್
ನಾನೂ ಸಹ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಆದರೆ ನನಗೆ ಪತ್ನಿ ಇದ್ದಾರೆ. ಅವರಿಗಿಲ್ಲ - ಇಷ್ಟೇ ವ್ಯತ್ಯಾಸ ಎನ್ನುವುದಾಗಿ ಬಿಜೆಪಿ ಮುಖಂಡ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಹೇಳಿದ್ದಾರೆ.

Published On :
ಯಾದಗಿರಿ: ನಾನೂ ಸಹ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಆದರೆ ನನಗೆ ಪತ್ನಿ ಇದ್ದಾರೆ. ಅವರಿಗಿಲ್ಲ - ಇಷ್ಟೇ ವ್ಯತ್ಯಾಸ ಎನ್ನುವುದಾಗಿ ಬಿಜೆಪಿ ಮುಖಂಡ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಹೇಳಿದ್ದಾರೆ.
ಶನಿವಾರ ಯಾದಗಿರಿ ಜಿಲ್ಲೆ ಗುರುಮಠಕಲ್ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಚಿಂಚನಸೂರ್ ಈ ಮೇಲಿನಂತೆ ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಚಿಂಚನಸೂರ್ ಡಾ. ಉಮೇಶ್ ಜಾಧವ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ. ಹಾಗಾದರೆ ಇಲ್ಲಿನ ಪ್ರತಿಯೊಬ್ಬರೂ ಮಂತ್ರಿಯಾದಂತೆ. ಹೀಗಾಗಿ ನೀವೆಲ್ಲರೂ ಅವರನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಂದು ಹಳೆಯ ಪರ್ವತದಂತೆ, ಅದೀಗ ನಿಧಾನವಾಗಿ ಕುಸಿಯಲು ಪ್ರಾರಂಭಿಸಿದೆ ಎಂದ ಶಾಸಕರು ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಕೋಲಿ ಸಮುದಾಯಕ್ಕೆ ಸೇರಿದ್ದ ಪ್ರಭಾವಿ ನಾಯಕ ಬಾಬೂರಾವ್ ಚಿಂಚನಸೂರ್ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಂಡೆದ್ದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


