ರಾಜಕೀಯ

ಮಂಡ್ಯದಲ್ಲಿ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಲ್ಲಿ ಕೈ ಕೊಡ್ತೇವೆ: ಸಾರಾ ಮಹೇಶ್ ಹೇಳಿಕೆ ಸರಿಯಲ್ಲ-ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಾವು ಕೈ ಕೊಡ್ತೇವೆ ಎಂಬ ಸಚಿವ ಸಾರಾಮಹೇಶ್ ಹೇಳಿಕೆ ಸರಿಯಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಲ್ಲಿ ಕೈ ಕೊಡ್ತೇವೆ: ಸಾರಾ ಮಹೇಶ್ ಹೇಳಿಕೆ ಸರಿಯಲ್ಲ-ಸಿದ್ದರಾಮಯ್ಯ
ಸಿದ್ದರಾಮಯ್ಯ, ಸಾರಾ ಮಹೇಶ್
Published On :

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್  ಕೈ ಕೊಟ್ರೆ, ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಾವು ಕೈ ಕೊಡ್ತೇವೆ ಎಂಬ ಸಚಿವ ಸಾರಾಮಹೇಶ್ ಹೇಳಿಕೆ ಸರಿಯಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪರಸ್ಪರ ನಂಬಿಕೆಯಿಂದ ಮೈತ್ರಿ ಮಾಡಿಕೊಂಡಿದ್ದೇವೆ.ಈ ರೀತಿಯ ಹೇಳಿಕೆಗಳಿಂದ ನಂಬಿಕೆ ಹಾಳಾಗುತ್ತದೆ.ನಂಬಿಕೆ ಬಗ್ಗೆ ಹೆಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಮಾತನಾಡಿದ್ದಾರಾ? ಅದನ್ನು ಬಿಟ್ಟು ಬೇರೆಯವರ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾಗಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ತುಮಕೂರು ಉಳಿಸಿಕೊಳ್ಳಿ ಎಂದು ವರಿಷ್ಠರಿಗೆ ಹೇಳಿದ್ದೆ.  9 ಹಾಲಿ ಸಂಸದರಿಗೆ ಟಿಕೆಟ್ ಕೊಟ್ಟು ಒಬ್ಬರಿಗೆ ಕೊಡಲಿಲ್ಲ ಎಂದರೆ ಚೆನ್ನಾಗಿರಲ್ಲ  ಅಂತಾ ಮಾತನಾಡಿದ್ದೇನೆ. ಸೆಂಟ್ರಲ್ ಕಮಿಟಿ ಸಭೆ ಮುಗಿದ ಬಳಿಕ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.