ರಾಜಕೀಯ

ಸಾ.ರಾ.ಮಹೇಶ್ ಹೇಳಿಕೆಗೆ ಲಾಜಿಕ್ ಇಲ್ಲ: ನಾಳೆ ನನ್ನ ನಿರ್ಧಾರ ಪ್ರಕಟಿಸುವೆ; ಸುಮಲತಾ

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿರುವ ಸುಮಲತಾ ಅಂಬರೀಶ್ ನಾಳೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ....

ಸಾ.ರಾ.ಮಹೇಶ್ ಹೇಳಿಕೆಗೆ ಲಾಜಿಕ್ ಇಲ್ಲ: ನಾಳೆ ನನ್ನ ನಿರ್ಧಾರ ಪ್ರಕಟಿಸುವೆ; ಸುಮಲತಾ
ಸುಮಲತಾ ಅಂಬರೀಷ್
Published On :
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿರುವ ಸುಮಲತಾ ಅಂಬರೀಶ್ ನಾಳೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಸುಮಲತಾ ಅಂಬರೀಶ್, ತಮ್ಮ ಸ್ಪರ್ಧೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.  ಯಾವಾಗ ನಾಮಪತ್ರ ಸಲ್ಲಿಸುತ್ತಾರೆ ಎಂಬ ಬಗ್ಗೆ ತಿಳಿಸುವುದಾಗಿ ಹೇಳಿದ್ದಾರೆ. ಆದರೆ, ಸುದ್ದಿಗೋಷ್ಠಿಯಲ್ಲಿ ಯಾರು ಇರುತ್ತಾರೆ ಮತ್ತು ಏನು ವಿಚಾರ ಎಂಬುದರ ಬಗ್ಗೆ ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.
ಮೇಲುಕೋಟೆಗೆ ಭೇಟಿ ನೀಡಿದ್ಧ ಅವರು, ನಿಖಿಲ್ ಮತ್ತು ಅಭಿ ಇಬ್ಬರು ಫ್ರೆಂಡ್ಸ್, ಆದರೆ  ಅಂಬಿ ಅಭಿಮಾನಿಗಳಿಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಿಖಿಲ್ ಮೇಲೆ ನನಗೆ ಯಾವ ದ್ವೇಷವೂ ಇಲ್ಲ ಎಂದು ಹೇಳಿದ್ದಾರೆ.
ಇನ್ನೂ ಸಾ.ರಾ ಮಹೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ, ಅವರ ಹೇಳಿಕೆಯಲ್ಲಿ ಲಾಜಿಕ್ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.