ರಾಜಕೀಯ

ಶಿಕಾರಿಪುರದಲ್ಲಿ ಮಧು ಬಂಗಾರಪ್ಪ ಪರ ಡಿಕೆಶಿ ಪ್ರಚಾರ

ಮಲೆನಾಡು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ.

ಶಿಕಾರಿಪುರದಲ್ಲಿ ಮಧು ಬಂಗಾರಪ್ಪ ಪರ ಡಿಕೆಶಿ ಪ್ರಚಾರ
ಸಾಂದರ್ಭಿಕ ಚಿತ್ರ
Published On :

ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ.  

ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ರಾಘವೇಂದ್ರ ಎದುರು  ಕಡಿಮೆ ಅಂತರದಲ್ಲಿ ಸೋಲನ್ನುಭವಿಸಿದ ಮಧು ಬಂಗಾರಪ್ಪ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದು, ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರದಲ್ಲಿ ಈಗಾಗಲೇ ನಿರತರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಬಿ.ಎಸ್. ಯಡಿಯೂರಪ್ಪ ಅವರ ಸ್ವಕ್ಷೇತ್ರವಾಗಿದ್ದು, ಪ್ರತಿಷ್ಠೆಯ ಕ್ಷೇತ್ರವಾಗಿದೆ. ಮುಂದಿನ ವಾರ ಶಿಕಾರಿಪುರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಟ್ರಬಲ್ ಶೂಟರ್ ಡಿ. ಕೆ. ಶಿವಕುಮಾರ್ ,  ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಡಿ. ಕೆ. ಶಿವಕುಮಾರ್ ಶಿವಮೊಗ್ಗಕ್ಕೆ ಬಂದರೆ ಬಿಜೆಪಿ ತೆಕ್ಕೆಯಿಂದ ಕ್ಷೇತ್ರವನ್ನು ಕಸಿದುಕೊಳ್ಳಲು ನೆರವಾಗುತ್ತದೆ ಎನ್ನುವ ಮಧುಬಂಗಾರಪ್ಪ, ಕಾಂಗ್ರೆಸ್ ನ ದೊಡ್ಡ ಕುಟುಂಬದಲ್ಲಿ ಶಿವಕುಮಾರ್ ಅವರ ನೆರವು ಅಗತ್ಯವಾಗಿದೆ ಎಂದಿದ್ದಾರೆ.
ತಂದೆಯನ್ನು ಕಳೆದುಕೊಂಡಿದ್ದೇನೆ. ಆದರೆ, ಶಿವಕುಮಾರ್ ಅವರೇ ತಮ್ಮ ತಂದೆಯಂತೆ ಇದ್ದಾರೆ. ಶಿವಮೊಗ್ಗದಲ್ಲಿ ಸಹಾಯ ಮಾಡುವುದಾಗಿ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.