ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಕೆಪಿಸಿಸಿಯಿಂದ ಅಧಿಕೃತ ಆಹ್ವಾನ
ಈ ಬಾರಿ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್....

Published On :
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಸೋಮವಾರ ಅಧಿಕೃತವಾಗಿ ಆಹ್ವಾನ ನೀಡಿದೆ.
ಈ ಸಂಬಂಧ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕರ್ನಾಟಕದಿಂದಲೇ ಯಾವದಾದರೊಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಕಷ್ಟದಲ್ಲಿದ್ದಾಗೆಲ್ಲ ಕರ್ನಾಟಕ ಬೆನ್ನೆಲಬಾಗಿ ನಿಂತಿದೆ. ಸದ್ಯದ ರಾಜಕೀಯ ಸ್ಥಿತಿಗತಿಗಳನ್ನು ನೋಡಿದರೆ ಕಾಂಗ್ರೆಸ್ ಪ್ರಬಲವಾಗಿದೆ. ನೀವು ಕರ್ನಾಟಕದಿಂದ ಸ್ಪರ್ಧಿಸುವುದನ್ನು ಸ್ವಾಗತಿಸುತ್ತೇವೆ. ಇದು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ಗೆ ಸ್ಪೂರ್ಥಿ ತಂದುಕೊಡಲಿದೆ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡ ರಾಜ್ಯದಿಂದ ಸ್ಪರ್ಧಿಸಿದ್ದರು ಎಂದು ದಿನೇಶ್ ಗುಂಡೂರಾವ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚಿಗಷ್ಟೇ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದರು. ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರಾಜ್ಯದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು.
ಕರ್ನಾಟಕ ಯಾವಾಗಲೂ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿದೆ. ಇದು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಸಹ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


