ಸುಮಲತಾ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯತೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರು: ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೆಣಸೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರೆಲ್ಲ ರಾಜ್ಯದ ಜನತೆ ಮುಂದೆ ಬಂದಿದ್ದಾರೆ. ಬರಲಿ ಬಿಡಿ ಸಂತೋಷ. ಮಂಡ್ಯ ಜನತೆಗಾಗಿ ಏನೇನು ಮಾಡುತ್ತಾರೆ ನೋಡೋಣ ಎಂದರು.
ಚುನಾವಣೆಯೆಂಬ ಯುದ್ಧ ಗೆಲ್ಲಲು ಶಾರದಾಂಬೆಯ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬನಿಗಾಗಿ ತಾಯಿ ಸನ್ನಿಧಿಗೆ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ. ನಮ್ಮ ಕುಟುಂಬದ ನಂಬಿಕೆ ಹಿನ್ನೆಲೆಯಲ್ಲಿ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಸಿಎಂ ತಿಳಿಸಿದರು.
ಪ್ರಮೋದ್ ಮಧ್ವರಾಜ್ ಜೆಡಿಎಸ್‌ನಿಂದ ಕಣಕ್ಕಿಳಿಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಮಧ್ವರಾಜ್ ಬೇರೆಯವರಲ್ಲ. ಅವರು ನಮ್ಮವರೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


