ರಾಜಕೀಯ

ಉಡುಪಿ: ಪ್ರಮೋದ್ ಮದ್ವರಾಜ್ ಪರ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಸುಳಿವು ...

ಉಡುಪಿ: ಪ್ರಮೋದ್ ಮದ್ವರಾಜ್ ಪರ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್
ಪ್ರಮೋದ್ ಮಧ್ವರಾಜ್
Published On :
ಶೃಂಗೇರಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.
ಶೃಂಗೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಮೋದ್ ಮಧ್ವರಾಜ್ ಹೊರಗಿನವರಲ್ಲ, ಅವರು ನಮ್ಮವರೇ, ಈ ಸಂಬಂಧ ಶೀಘ್ರವೇ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮಧ್ವರಾಜ್, ಈ ಸಂಬಂಧ ಜೆಡಿಎಸ್ ನಾಯಕರು ಹಾಗೂ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.ಆದರೆ ಇನ್ನೂ .ಯಾವುದು ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ. ಶೀಘ್ರವೇ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಮೈತ್ರಿ ಸರ್ಕಾರದ ನಿಯಮದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಗೆ ಬಿಟ್ಟುಕೊಡಲಾಗಿದೆ, ಹೀಗಾಗಿ ಯಾವುದೇ ಅಭ್ಯರ್ಥಿ ಕಣಕ್ಕಿಳಿದರೂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಜೊತೆಯಾಗಿಯೇ ಕೆಲಸ ಮಾಡಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.