ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಂತಿಮ ಪಟ್ಟಿ ಇಲ್ಲಿದೆ
ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ...

Published On :
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ತಡರಾತ್ರಿವರೆಗೂ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಗೆ ಸಮಿತಿ ಅಂತಿಮ ಮುದ್ರೆ ಒತ್ತಿದೆ.
ಚುನಾವಣೆ ಸಮಿತಿ ಸಭೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಲು ರಾಜ್ಯ ನಾಯಕರು ವಿರೋಧ ವ್ಯಕ್ತಪಡಿದ್ದಾರೆ ಎನ್ನಲಾಗಿದೆ.ರಾಜ್ಯ ನಾಯಕರ ವಿರೋಧದ ನಡುವೆಯೂ ಹಾಲಿ ಸಂಸದರಿಗೆ ಟಿಕೆಟ್ ನೀಡುವುದನ್ನು ಕೇಂದ್ರ ಚುನಾವಣಾ ಸಮಿತಿ ಖಚಿತಪಡಿಸಿದೆ.
ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳಲ್ಲಿ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಗೆ ಸಮಿತಿ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಮಂಡ್ಯ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್ ಹೆಸರು ಅಂತಿಮಗೊಳಿಸಿದ್ದು, ಸುಮಲತಾ ಅವರಿಗೆ ಬೆಂಬಲ ನೀಡದಿದ್ದರೆ ಪಕ್ಷದ ಅಸ್ಥಿತ್ವದ ದೃಷ್ಟಿಯಿಂದ ಅಶ್ವಥ್ ನಾರಾಯಣ್ ಕಣಕ್ಕಿಳಿಸುವ ಸಾಧ್ಯತೆ ಇದೆ.
ಬಿಜೆಪಿಯ ಹಾಲಿ ಎಲ್ಲಾ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ. ಮಂಡ್ಯದಲ್ಲಿ ಅಭ್ಯರ್ಥಿ ಕಣಕ್ಕಿಳಿಸಬೇಕೇ ಅಥವಾ ಬೇಡವೇ ಎಂದು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದು ಬೆಂಗಳೂರಿನ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾತ್ರಿ ೧ ಗಂಟೆವರೆಗೂ ಚುನಾವಣಾ ಸಮಿತಿ ಸಭೆ ನಡೆಯಿತು. ಟಿಕೆಟ್ ಆಯ್ಕೆ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಗಲಿದೆ. ಹಾಲಿ ಎಲ್ಲಾ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎಂದು ಅವರು ಸ್ಪಷ್ಟಪಡಿಸಿದರು.
ಅಭ್ಯರ್ಥಿಗಳ ಪಟ್ಟಿ
ಚಾಮರಾಜನಗರ- ಶ್ರೀನಿವಾಸಪ್ರಸಾದ್
ಮೈಸೂರು-ಕೊಡಗು- ಪ್ರತಾಪ ಸಿಂಹ
ಮಂಡ್ಯ -ಅಶ್ವಥ್ ನಾರಾಯಣ್
ಹಾಸನ- ಎ.ಮಂಜು
ಉಡುಪಿ, ಚಿಕ್ಕಮಗಳೂರು - ಶೋಭಾ ಕರಂದ್ಲಾಜೆ
ದಕ್ಷಿಣ ಕನ್ನಡ- ನಳೀನ್ ಕುಮಾರ್ ಕಟೀಲ್
ಶಿವಮೊಗ್ಗ- ಬಿ.ವೈ ರಾಘವೇಂದ್ರ
ಉತ್ತರ ಕನ್ನಡ- ಅನಂತಕುಮಾರ್ ಹೆಗಡೆ
ಬೆಳಗಾವಿ - ಸುರೇಶ್ ಅಂಗಡಿ
ಚಿಕ್ಕೋಡಿ- ರಮೇಶ್ ಕತ್ತಿ
ವಿಜಾಪುರ- ರಮೇಶ್ ಜಿಗಜಿಣಗಿ
ಬಾಗಲಕೋಟೆ- ಪಿ.ಸಿ. ಗದ್ದೀಗೌಡರ್
ಹಾವೇರಿ- ಶಿವಕುಮಾರ್ ಉದಾಸಿ
ಹುಬ್ಬಳ್ಳಿ ಧಾರವಾಡ- ಪ್ರಹ್ಲಾದ್ ಜೋಷಿ
ದಾವಣಗೆರೆ- ಜಿ.ಎಂ. ಸಿದ್ದೇಶ್ವರ್
ಚಿತ್ರದುರ್ಗ- ಎ. ನಾರಾಯಣಸ್ವಾಮಿ
ಕೊಪ್ಪಳ- ಕರಡಿ ಸಂಗಣ್ಣ
ರಾಯಚೂರು- ಅಮರೇಶ್ ನಾಯಕ್
ಬಳ್ಳಾರಿ- ದೇವೇಂದ್ರಪ್ಪ
ಬೀದರ್- ಭಗವಂತ ಖೂಬಾ
ಕಲ್ಬುರ್ಗಿ- ಉಮೇಶ್ ಜಾಧವ್,
ಕೋಲಾರ- ಚಲವಾದಿ ನಾರಾಯಣಸ್ವಾಮಿ
ಚಿಕ್ಕಬಳ್ಳಾಪುರ- ಬಿ.ಎನ್.ಬಚ್ಚೇಗೌಡ
ತುಮಕೂರು- ಜಿ.ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ನಿಶಾ ಯೋಗಿಶ್ವರ್
ಬೆಂಗಳೂರು ದಕ್ಷಿಣ- ತೇಜಸ್ವಿನಿ ಅನಂತಕುಮಾರ್
ಬೆಂಗಳೂರು ಕೇಂದ್ರ- ಪಿ.ಸಿ. ಮೋಹನ್
ಬೆಂಗಳೂರು ಉತ್ತರ- ಡಿ.ವಿ. ಸದಾನಂದಗೌಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


