ಲೋಕಾ ಸಮರ 2019: ನಿಖಿಲ್, ಸುಮಲತಾ ಚಿತ್ರ ಪ್ರಸಾರಕ್ಕೆ ಆಯೋಗ ನಿರ್ಬಂಧ!
ಲೋಕಸಭಾ ಚುನಾವಣೆ 2019ರಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ನಟಿ ಸುಮಲತಾ ಮತ್ತು ನಟ ನಿಖಿಲ್ ಕುಮಾರಸ್ವಾಮಿ ಅವರ ಯಾವುದೇ ಚಿತ್ರಗಳನ್ನು ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಜಾರಿ ಮಾಡಿದೆ.

Published On :
ಬೆಂಗಳೂರು: ಲೋಕಸಭಾ ಚುನಾವಣೆ 2019ರಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ನಟಿ ಸುಮಲತಾ ಮತ್ತು ನಟ ನಿಖಿಲ್ ಕುಮಾರಸ್ವಾಮಿ ಅವರ ಯಾವುದೇ ಚಿತ್ರಗಳನ್ನು ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಜಾರಿ ಮಾಡಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಆಯುಕ್ತೆ ಎನ್. ಮಂಜುಶ್ರೀ ಈ ಕುರಿತಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ದೂರದರ್ಶನದಲ್ಲಿ ಇವರ ಚಿತ್ರಗಳನ್ನು ಪ್ರಸಾರ ಮಾಡದಂತೆ ಕೋರಿದ್ದರು. ಈ ನಿಯಮ ಖಾಸಗಿ ವಾಹಿನಿಗಳು ಹಾಗೂ ಚಿತ್ರಮಂದಿರಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ. ಈ ಮನವಿಯನ್ನು ಚುನಾವಣಾ ಆಯೋಗ ಪುರಸ್ಕರಿಸಿದೆ.
ನಿಖಿಲ್ ಎರಡು ಚಿತ್ರಗಳಲ್ಲಿ ನಟಿಸಿದರೆ, ಸುಮಲತಾ ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಹಾಗಾಗಿ, ನಿಖಿಲ್ ಮತ್ತು ಸುಮಲತಾ ನಟನೆಯ ಸಿನಿಮಾಗಳನ್ನು ಚುನಾವಣೆ ಪೂರ್ಣಗೊಳ್ಳುವವರೆಗೆ ಸರ್ಕಾರಿ ಸ್ವಾಮ್ಯದ ದೂರದರ್ಶನದಲ್ಲಿ ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಮಂಡ್ಯದಲ್ಲಿ ಏ.18ರಂದು ಚುನಾವಣೆ ನಡೆಯಲಿದೆ. ಮತದಾನ ಮುಕ್ತಾಯದವರೆಗೂ ಸರ್ಕಾರಿ ವಾಹಿನಿ ದೂರದರ್ಶನದಲ್ಲಿ ಈ ಇಬ್ಬರು ನಟರ ಸಿನಿಮಾ ಪ್ರದರ್ಶನ ಮಾಡದಂತೆ ನಿರ್ಬಂಧ ಹೇರಿದೆ.
ಆದರೆ ಸುಮಲತಾ ಅವರ ಬೆಂಬಲಕ್ಕೆ ನಿಂತು ಅವರ ಪರ ಪ್ರಚಾರ ಮಾಡುತ್ತಿರುವ ನಟ ದರ್ಶನ್ ಹಾಗೂ ಯಶ್ ಅವರ ಸಿನಿಮಾಗಳಿಗೂ ನಿರ್ಬಂಧ ಹೇರುವಂತೆ ಮನವಿ ಸಲ್ಲಿಸಲಾಗಿತ್ತಾದರೂ ಈ ಇಬ್ಬರು ನಟರು ಸ್ಪರ್ಧಿಗಳಲ್ಲ. ಹೀಗಾಗಿ ಈ ಬಗ್ಗೆ ಆಯೋಗ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮಗ ನಿಖಿಲ್ ಈಗ ತಾನೇ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಜಾಗ್ವಾರ್, ಸೀತಾರಾಮ ಕಲ್ಯಾಣ ಚಿತ್ರಗಳು ಈಗಾಗಲೇ ತೆರೆ ಕಂಡಿದ್ದು, ಅವರ ಅಭಿನಯದ ಕುರುಕ್ಷೇತ್ರ ಚಿತ್ರ ಇನ್ನೂ ತೆರೆ ಕಂಡಿಲ್ಲ. ಇನ್ನು ಸುಮಲತಾ ಕನ್ನಡ, ತೆಲುಗು, ತಮಿಳು ಸೇರಿ ನೂರಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruPoliticsರಾಜಕೀಯDoordarshanSumalatha Ambareeshಲೋಕಸಭಾ ಚುನಾವಣೆ 2019Loksabha Election 2019ನಿಖಿಲ್ ಕುಮಾರಸ್ವಾಮಿNikhil Kumaraswamyಸುಮಾಲತಾ ಅಂಬರೀಶ್ದೂರದರ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


