ರಾಜಕೀಯ

ಮೋದಿ ಆಡಳಿತದಲ್ಲಿ ಆರ್ ಎಸ್ಎಸ್ ಚಡ್ಡಿ ಅಭಿವೃದ್ಧಿಯಾಗಿದೆ: ರಾಮಲಿಂಗಾರೆಡ್ಡಿ ವ್ಯಂಗ್ಯ

ಮೋದಿ ಆಡಳಿತದಲ್ಲಿ ಆರ್ ಎಸ್ ಎಸ್ ಚಡ್ಡಿ ಉದ್ದವಾಗುವ ಮೂಲಕ ಅಭಿವೃದ್ಧಿಯಾಗಿದೆಯೇ ಹೊರತು ಮೋದಿಯಿಂದ ದೇಶ ಅಭಿವೃದ್ಧಿಯಾಗಿಲ್ಲ.

ಮೋದಿ ಆಡಳಿತದಲ್ಲಿ ಆರ್ ಎಸ್ಎಸ್ ಚಡ್ಡಿ ಅಭಿವೃದ್ಧಿಯಾಗಿದೆ: ರಾಮಲಿಂಗಾರೆಡ್ಡಿ ವ್ಯಂಗ್ಯ
ರಾಮಲಿಂಗಾರೆಡ್ಡಿ
Published On :
ಬೆಂಗಳೂರು: ಮೋದಿ ಆಡಳಿತದಲ್ಲಿ ಆರ್ ಎಸ್ ಎಸ್ ಚಡ್ಡಿ ಉದ್ದವಾಗುವ ಮೂಲಕ ಅಭಿವೃದ್ಧಿಯಾಗಿದೆಯೇ ಹೊರತು ಮೋದಿಯಿಂದ ದೇಶ ಅಭಿವೃದ್ಧಿಯಾಗಿಲ್ಲ. ಮೋದಿ ಆರ್.ಎಸ್.ಎಸ್‍ ಹೆಸರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ 'ರಿಲಯನ್ಸ್ ಸೇವಾ ಸಂಘ'ವನ್ನಾಗಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ಗೊಬೆಲ್ಸನ್ನೂ ಮಣಿಸಿದ್ದಾರೆ. ಭಾರತ-ಪಾಕಿಸ್ತಾನ ನಡುವಿನ ಯುದ್ಧವನ್ನು ಮೋದಿ ಆಂಡ್ ಟೀಂ ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಮೂಲಕ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ತೊಂದರೆಯುಂಟು ಮಾಡಿದ್ದಾರೆ. ಯುದ್ಧ ಮಾಡುವುದು ಹೇಗೆ ಎಂಬ ಬಗ್ಗೆ ಬಿಜೆಪಿಯವರು ದಿ.ಪ್ರಧಾನಿ ಇಂದಿರಾಗಾಂಧಿ ಅವರಿಂದ ಕಲಿಯಬೇಕು ಎಂದರು. ಅಲ್ಲದೆ
ಭಾರತ-ಪಾಕಿಸ್ತಾನದ ಮಧ್ಯೆ ಮೋದಿ ಯುದ್ಧ ಘೋಷಿಸಬೇಕಿತ್ತು ಎಂದು ಅವರು ಬಿಜೆಪಿ ನಾಯಕರನ್ನು ತಿವಿದರು.
ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವುದಾಗಿ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದು, ಗೋಹತ್ಯೆ ನಿಷೇಧದ ಬದಲಿಗೆ ಎಲ್ಲಾ ಪ್ರಾಣಿ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು. ಗೋ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಪ್ರೀತಿಯಿದೆಯಾದರೂ ಅದನ್ನೆಂದು ಪಕ್ಷ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಹಿಂದುತ್ವದ ಬಗ್ಗೆ ನಕಲಿ ಭಾಷಣ ಮಾಡುವ ಮೋದಿಯವರ ಆಡಳಿತದಲ್ಲಿಯೇ ದೇಶ ಗೋ ಮಾಂಸ ರಫ್ತು ಮಾಡುವುದರಲ್ಲಿ ವಿಶ್ವದ ಎರಡನೇ ದೇಶವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಸ್ವತಃ ದ್ವಾರಕಾ ಪೀಠದ ಶಂಕರಾಚಾರ್ಯ ಶ್ರೀ ಸ್ವರೂಪಾನಂದ ಸರಸ್ವತಿ ಅವರೇ ಬಹಿರಂಗ ಹೇಳಿಕೆ ನೀಡಿದ್ದಾರೆ. ಸ್ವರೂಪಾನಂದ ಸರಸ್ವತಿಯವರ ಹೇಳಿಕೆಯಿಂದ ಮೋದಿಯವರ ನಕಲಿ ಹಿಂದುತ್ವದ ಮುಖವಾಡ ಕಳಚಿ ಬಿದ್ದಿದೆ ಎಂದು ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನಡೆದ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ವ್ಯವಸ್ಥಿತ ಷಡ್ಯಂತ್ರ ರೂಪಿಸಿದ್ದು, ಟೆಕ್ಕಿ ವೇಷಧಾರಿಯಾಗಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಟೆಕ್ಕಿಗಳ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ಮೋದಿ ಭಕ್ತರು ಸಂಸ್ಕೃತಿಹೀನರು. ಮುಂದೆ ಮೋದಿ ಅವರು ರಾಜ್ಯಕ್ಕೆ ಬಂದಾಗ ತಿರುಗೇಟು ನೀಡಲು ಕಾಂಗ್ರೆಸ್ ಪಕ್ಷಕ್ಕೂ ಗೊತ್ತಿದೆ ಎನ್ನುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.