ಮಂಡ್ಯ ಲೋಕಸಮರ: ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮುಂದೂಡಿಕೆ
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಇಂದು ಸಲ್ಲಿಕೆಯಾಗಬೇಕಿದ್ದ ನಾಮಪತ್ರ ಸಲ್ಲಿಕೆ ಮುಂದೂಡಿಕೆಯಾಗಿದೆ...

Published On :
ಮಂಡ್ಯ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಇಂದು ಸಲ್ಲಿಕೆಯಾಗಬೇಕಿದ್ದ ನಾಮಪತ್ರ ಸಲ್ಲಿಕೆ ಮುಂದೂಡಿಕೆಯಾಗಿದ್ದು, ಮಾರ್ಚ್ 25 ಅಂದರೆ ಸೋಮವಾರ ಅಧಿಕೃತವಾಗಿ ಸಲ್ಲಿಕೆಯಾಗಲಿದೆ.
ಈ ಮೊದಲು ಸೋಮವಾರವೇ ನಾಮಪತ್ರ ಸಲ್ಲಿಕೆ ಮಾಡುವ ಬಗ್ಗೆ ಯೋಜನೆ ಸಿದ್ದವಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಗುರುವಾರ ಮಧ್ಯಾಹ್ನ ಸಾಂಕೇತಿಕವಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಹಿತಿ ಬಂದಿತ್ತು. ಆದರೆ ಈಗ ಈ ಸಾಂಕೇತಿಕ ನಾಮಪತ್ರ ಸಲ್ಲಿಕೆಯನ್ನು ಬಿಟ್ಟು ಸೋಮವಾರವೇ ಅಧಿಕೃತವಾಗಿ ನಾಮಪತ್ರ ಸಲ್ಲಿಕೆಯಾಗಲಿದೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜು, ಸೋಮವಾರದಂದು ಎಲ್ಲಾ ನಾಯಕರ ಸಮ್ಮುಖದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


