ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಕುಮ್ಮಕ್ಕು: ಸಿದ್ದು ಆಪ್ತರನ್ನು ಅಮಾನತುಗೊಳಿಸಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಅವಧಿ ಪೂರ್ಣ ಮಾಡಬೇಕು ಎಂಬುದೇ ತಮ್ಮ ಆಸೆಯಾಗಿದೆ. ಆದರೆ ಅದಕ್ಕೆ ಕಾಂಗ್ರೆಸ್ ನಾಯಕರು ..

Published On :
ಶಿವಮೊಗ್ಗ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಅವಧಿ ಪೂರ್ಣ ಮಾಡಬೇಕು ಎಂಬುದೇ ತಮ್ಮ ಆಸೆಯಾಗಿದೆ. ಆದರೆ ಅದಕ್ಕೆ ಕಾಂಗ್ರೆಸ್ ನಾಯಕರು ಅವಕಾಶ ಕೊಡುತ್ತಿಲ್ಲ ಎಂಬುದನ್ನು ಸಿಎಂ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಅಭದ್ರತೆ ಕಾಡಬಾರದು ಎಂದಾದರೇ ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಬೇಕು ಎಂದು ಬಿಜೆಪಿ ಮುಖಂಡ ಕೆ.ಎಸ್ ಆಶ್ವರಪ್ಪ ಒತ್ತಾಯಿಸಿದ್ದಾರೆ.
ತಮ್ಮ ಬೆಂಬಲಿಗರ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅವರೇ ಕಂಟಕರಾಗಿದ್ದಾರೆ ಎಂದು ದೂರಿದ್ದಾರೆ,
ಸಿದ್ದರಾಮಯ್ಯ ಒಂದು ಕಡೆ ತೊಟ್ಟಿಲು ತೂಗುತ್ತಾರೆ ಮತ್ತೊಂದು ಕಡೆ ಮಗವನ್ನು ಚಿವುಟುತ್ತಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


