ರಾಜಕೀಯ

ದಲಿತ ಸಿಎಂ ಹೆಸರಲ್ಲಿ ನನಗೆ ಅಪಮಾನ ಮಾಡಬೇಡಿ: ಮಲ್ಲಿಕಾರ್ಜುನ ಖರ್ಗೆ

ಪದೇ ಪದೇ ದಲಿತ ಮುಖ್ಯಮಂತ್ರಿ ಹೆಸರು ಪ್ರಸ್ತಾಪ ಮಾಡಿ ತಮಗೆ ಅಪಮಾನ ಮಾಡಬೇಡಿ‌ ಎಂದು ಸ್ವಪಕ್ಷೀಯರಿಗೆ ಮತ್ತು ಮಿತ್ರ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹಿರಿಯ...

ದಲಿತ ಸಿಎಂ ಹೆಸರಲ್ಲಿ ನನಗೆ ಅಪಮಾನ ಮಾಡಬೇಡಿ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ್ ಖರ್ಗೆ
Published On :
ಹುಬ್ಬಳ್ಳಿ: ಪದೇ ಪದೇ ದಲಿತ ಮುಖ್ಯಮಂತ್ರಿ ಹೆಸರು ಪ್ರಸ್ತಾಪ ಮಾಡಿ ತಮಗೆ ಅಪಮಾನ ಮಾಡಬೇಡಿ‌ ಎಂದು ಸ್ವಪಕ್ಷೀಯರಿಗೆ ಮತ್ತು ಮಿತ್ರ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಯವಾಗಿಯೇ ಚಾಟಿ ಬೀಸಿದ್ದಾರೆ.
ಇಂದು ಹುಬ್ಬಳ್ಳಿ ಖಾಸಗಿ ಹೋಟೆಲ್ ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ಬರುತ್ತವೆ. ನಂತರ ನಾನು ಈ ಬಗ್ಗೆ ಕೇಳಲ್ಲ, ಅವರು ಈ ಬಗ್ಗೆ ಹೇಳುವುದಿಲ್ಲ ಎಂದು ಪ್ರತಿ ಹಂತದಲ್ಲೂ ಅಸಮಾಧಾನ ಹೊರಹಾಕಿದರು.
ಉಮೇಶ್ ಜಾಧವ್ ಅವರನ್ನು ರಾಜಕೀಯಕ್ಕೆ ಕರೆತಂದಿದ್ದು ನಾನು ಹಾಗೂ ಧರ್ಮಸಿಂಗ್. ತಮ್ಮನ್ನು ಸೋಲಿಸಲು ಮೋದಿ ಸೇರಿ ಬಿಜೆಪಿಯ ಕೆಲವು ನಾಯಕರು ಕುತಂತ್ರ ಮಾಡಿದ್ದಾರೆ. ಆದರೆ ಎಂದಿಗೂ ಅದು ಫಲಿಸುವುದಿಲ್ಲ. ಸಂಸತ್ತಿನಲ್ಲಿ ಬೇರೆಯವರ ರೀತಿ ನಾನು ನಿದ್ರೆ ಮಾಡಿಲ್ಲ ಎಂದು ತಿರುಗೇಟು ನೀಡಿದರು.
ಕುಂದಗೋಳ, ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಪ್ರತಿಪಕ್ಷ ನಾಯಕನಾಗಿ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಕೆಲಸ ನೋಡಿ ಜನರು ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.