ಚೆನ್ನಮ್ಮ, ಓಬವ್ವ ಬಳೆ ತೊಟ್ಟೇ ಸಾಧನೆಯ ಉತ್ತುಂಗಕ್ಕೇರಿದವರು: ಶೋಭಾಗೆ ಸಿದ್ದು ಭರ್ಜರಿ ಟಾಂಗ್!
ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕರ ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗದಿದ್ದರೆ ಸಿದ್ದರಾಮಯ್ಯ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಟೀಕಿಸಿದ್ದ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ಸಿದ್ದರಾಮಯ್ಯ ತಮ್ಮ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.

Published On :
ಬೆಂಗಳೂರು: ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕರ ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗದಿದ್ದರೆ ಸಿದ್ದರಾಮಯ್ಯ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಟೀಕಿಸಿದ್ದ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ಸಿದ್ದರಾಮಯ್ಯ ತಮ್ಮ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕುಮಾರಿ ಶೋಭಾ ಕರಂದ್ಲಾಜೆ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಕೈಲಾಗದವನು ಮೈ ಪರಚಿಕೊಂಡ ಎಂಬ ಗಾದೆ ಮಾತಿನಂತೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ. ಮೈತ್ರಿ ಸರ್ಕಾರ ಪ್ರಾರಂಭವಾದ ದಿನದಿಂದ ದಿನ ಬೆಳಗಾದರೇ ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಹುಳ ಬಿಡುವ ಮೂಲಕ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮನ್ನು ದೇವರಾಜ ಅರಸ್ ಅವರ ಜೊತೆ ಹೋಲಿಸಿಕೊಳ್ಳುತ್ತಾರೆ ಆದರೆ, ಅವರಿಗೆ ಹೋಲಿಸಿಕೊಳ್ಳುವ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದರು.
=
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruPoliticsರಾಜಕೀಯSiddaramaiahಸಿದ್ದರಾಮಯ್ಯShobha Karandlajeಶೋಭಾ ಕರಂದ್ಲಾಜೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


