ಲೋಕಸಭೆ ಚುನಾವಣೆ ಮತಎಣಿಕೆ: ಪತಿಯನ್ನು ನೆನೆದು ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್
2019ರ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಇಂದು ತಿಳಿಯಲಿದೆ...

Published On :
ಬೆಂಗಳೂರು: 2019ರ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಇಂದು ತಿಳಿಯಲಿದೆ.
ಇದೇ ವೇಳೆ ಮಾಜಿ ಸಚಿವ ಅನಂತ್ಕುಮಾರ್ಅವರ ಪತ್ನಿ, ಬಿಜೆಪಿ ನಾಯಕಿ ತೇಜಸ್ವಿನಿ ಅನಂತ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತ ಎಂದಿದ್ದಾರೆ.
ಈ ಕ್ಷೇತ್ರದಲ್ಲಿ ಆರು ಬಾರಿ ಗೆದ್ದು ಸುಶಿಕ್ಷಿತ ಆಡಳಿತ ನಡೆಸಿದ್ದ ತಮ್ಮ ಪತಿ ಅನಂತ್ ಕುಮಾರ್ ಅವರನ್ನು ನೆನಪಿಸಿಕೊಂಡ ಅವರು, ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು 1991ರಿಂದ ಪ್ರಾರಂಭವಾಯಿತು. ಅನಂತ್ಕುಮಾರ್ ಯಾವುದೇ ಹಗರಣ, ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ಬಿಜೆಪಿ ಪಕ್ಷ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರು ದಕ್ಷಿಣದ ಟಿಕೆಟ್ ಈ ಬಾರಿ ತೇಜಸ್ವಿನಿ ಅನಂತ್ಕುಮಾರ್ ಅವರ ಪಾಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿತ್ತು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tweetಅನಂತ್ ಕುಮಾರ್ಟ್ವೀಟ್AnanthkumarBengaluru Southಬೆಂಗಳೂರು ದಕ್ಷಿಣತೇಜಸ್ವಿನಿ ಅನಂತ್ ಕುಮಾರ್Tejaswini Ananthkumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


