ರಾಜಕೀಯ

ಕುಂದಗೋಳ ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವು

ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ...

ಕುಂದಗೋಳ ವಿಧಾನಸಭೆ ಉಪಚುನಾವಣೆ:  ಕಾಂಗ್ರೆಸ್ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವು
ಕುಸುಮಾ ಶಿವಳ್ಳಿ
Published On :
ಕುಂದಗೋಳ: ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಗೆಲುವು ಸಾಧಿಸಿದ್ದಾರೆ.
ಒಟ್ಟು 17 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಿತು, ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಕುಸುಮಾ ಶಿವಳ್ಳಿ ಕೊನೆಯ ಎರಡು ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದರು, ಅಂತಿಮ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಗೆಲುವು  ಸಾಧಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಚಿವ ಸಿ.ಎಸ್ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ನಡೆದ ಉಪ ಚನಾವಣೆಯಲ್ಲಿ ಕುಸುಮಾವತಿ ವಿರುದ್ಧ ಬಿಜೆಪಿಯ ಎಸ್ ಐ ಚಿಕ್ಕಣ್ಣನವರ್ ಸ್ಪರ್ದಿಸಿದ್ದರು, ಮೇ 19 ರಂದು ಕುಂದಗೋಳ ಮತ್ತ ಚಿಂಚೋಳಿಯಲ್ಲಿ ಮತದಾನ ನಡೆದಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.