ರಾಜಕೀಯ

ಶುಕ್ರವಾರ ಬೆಳಗಿನವರೆಗೆ ಮಾತ್ರ ಕುಮಾರಸ್ವಾಮಿ ಸಿಎಂ: ಸದಾನಂದಗೌಡ

ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು, ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ....

ಶುಕ್ರವಾರ ಬೆಳಗಿನವರೆಗೆ ಮಾತ್ರ ಕುಮಾರಸ್ವಾಮಿ ಸಿಎಂ: ಸದಾನಂದಗೌಡ
ಡಿ.ವಿ ಸದಾನಂದಗೌಡ
Published On :
ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು,  ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. 
ಎಚ್‌ಡಿ ಕುಮಾರಸ್ವಾಮಿ ಅವರು ಮೇ 24, ಶುಕ್ರವಾರ ಬೆಳಗ್ಗಿನ ವರೆಗೆ ಮಾತ್ರ ಸಿಎಂ ಆ ನಂತರ ಮೈತ್ರಿ ಸರ್ಕಾರ ಮುರಿದು ಬೀಳಲಿದೆ. ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ. 
ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ವರೆಗೆ ಮಾತ್ರ. ನಾಳೆ ರಾತ್ರಿ ಕುಮಾರಸ್ವಾಮಿ ಅವರಿಗೆ ನಿದ್ದೆ ಬರುವುದಿಲ್ಲ. ಹಾಗಾಗಿ ಶುಕ್ರವಾರ ಬೆಳಗ್ಗೆ ಶೇ.100ರಷ್ಟು ಕುಮಾರಸ್ವಾಮಿ ಸಿಎಂ ಹುದ್ದೆಯಿಂದ ಕೆಳಗಿಳಿಯುತ್ತಾರೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ. 
ಲೋಕಸಭೆ ಚುನಾವಣೆ ಫಲಿತಾಂಶ ಮೈತ್ರಿ ಸರಕಾರದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.