ರಾಜಕೀಯ

ಜಮ್ಮುವಿನಲ್ಲೂ ಚರ್ಚೆಗೆ ಗ್ರಾಸವಾದ ರಾಜ್ಯ ರಾಜಕಾರಣ; ಪರಮೇಶ್ವರ್ ಹೇಳಿಕೆಗೆ ಒಮರ್ ಅಬ್ದುಲ್ಲಾ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರಾಜಕಾರಣ ಹಾಗೂ ಸರ್ಕಾರದ ಅಸ್ಥಿರತೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಆಡಳಿತಾರೂಢ ಮಿತ್ರಪಕ್ಷಗಳ ಚುನಾವಣೋತ್ತರ ಆತ್ಮಾವಲೋಕನಾ ಸಭೆಗೆ ಜಮ್ಮುಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.

ಜಮ್ಮುವಿನಲ್ಲೂ ಚರ್ಚೆಗೆ ಗ್ರಾಸವಾದ ರಾಜ್ಯ ರಾಜಕಾರಣ; ಪರಮೇಶ್ವರ್ ಹೇಳಿಕೆಗೆ ಒಮರ್ ಅಬ್ದುಲ್ಲಾ ಪ್ರತಿಕ್ರಿಯೆ
ಒಮರ್ ಅಬ್ದುಲ್ಲಾ
Published On :

ಶ್ರೀನಗರ: ಕರ್ನಾಟಕ ರಾಜ್ಯ ರಾಜಕಾರಣ ಹಾಗೂ ಸರ್ಕಾರದ ಅಸ್ಥಿರತೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಆಡಳಿತಾರೂಢ ಮಿತ್ರಪಕ್ಷಗಳ ಚುನಾವಣೋತ್ತರ ಆತ್ಮಾವಲೋಕನಾ ಸಭೆಗೆ ಜಮ್ಮುಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ರಾಜ್ಯ ಸಂಪುಟ ವಿಶ್ವಾಸವಿರಿಸಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ರಾಷ್ಟ್ರೀಯ ಕಾನ್ಫರೆನ್ಸ್ (ಎನ್ ಸಿ ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ'ಆಡಳಿತದ ಮೇಲೆ ಸಂಪುಟದ ನಂಬಿಕೆ, ವಿಶ್ವಾಸವೇ ಅಂತಿಮ' ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಎಷ್ಟು ಸಮಯದ ಹಿಂದೆ 8-10 ಶಾಸಕರು ಆಡಳಿತದ  ಮೇಲೆ ನಂಬಿಕೆ ಕಳೆದುಕೊಂಡು, ತಮ್ಮದೇ ಮಾರ್ಗ ಆರಿಸಿಕೊಂಡಿದ್ದಾರೆ? ಆದರೆ, ಯಾವುದೇ ಆಡಳಿತದ ಮೇಲೆ ಸಂಪುಟದ ನಂಬಿಕೆ, ವಿಶ್ವಾಸವೇ ಅಂತಿಮ' ಎಂದಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ನಡೆದ ಮೈತ್ರಿಕೂಟದ ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಡಳಿತದ ಮೇಲೆ ಸಂಪುಟಕ್ಕೆ ನಂಬಿಕೆಯಿದೆ. ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿಕೂಟ ಮುಂದುವರಿಯಲಿದೆ. ಅದನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ಸಫಲವಾಗುವುದಿಲ್ಲ ಎಂದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.