ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿದರೆ, ಕಾಂಗ್ರೆಸ್ ನಾಮಾವಶೇಷ; ಎಂಎಲ್ಸಿ ಸಿಎಂ ಲಿಂಗಪ್ಪ ಎಚ್ಚರಿಕೆ
ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

ರಾಮನಗರ: ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಶನಿವಾರ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಇಂದು ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಅತಿದೊಡ್ಡ ಪ್ರಮಾದ ಎಸಗಿದೆ ಎಂದು ಅಭಿಪ್ರಾಯಪಟ್ಟರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲನ್ನು ಪ್ರಸ್ತಾಪಿಸಿದ ಲಿಂಗಪ್ಪ, ದೇಶದ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಇಂತಹ ಅತಿ ಕೆಟ್ಟ ಸೋಲು ಎಂದೂ ಕಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜೆಡಿಎಸ್ ನೊಂದಿಗೆ ಮೈತ್ರಿ ಒಪ್ಪಂದಕ್ಕೆ ಕಾರಣರಾದ ಪಕ್ಷದ ಕೆಲ ರಾಜ್ಯ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, ಕೆಲವರಿಗೆ ಅಧಿಕಾರ ದಾಹ ಹೆಚ್ಚಾಗಿದ್ದು, ಅವರಿಗೆ ಪಕ್ಷದ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
37 ಶಾಸಕರನ್ನು ಹೊಂದಿರುವ ಜೆಡಿಎಸ್ ಪಕ್ಷದ ನಾಯಕ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವುದನ್ನು ನೋಡಿ, 105 ಶಾಸಕರನ್ನು ಹೊಂದಿರುವ ಪಕ್ಷ ಸುಮ್ಮನಿರಲು ಸಾಧ್ಯವೇ ..? ಎಂದು ಪ್ರಶ್ನಿಸಿದರಲ್ಲದೇ, ಅಧಿಕಾರ ಹಿಡಿಯಲು ಬಿಜೆಪಿ ನಾಯಕರು ನಡೆಸುತ್ತಿರುವ ಪ್ರಯತ್ನದಲ್ಲಿ ತಪ್ಪೇನಿದೆ, ಇದು ಸಹಜ ಕೂಡ ಎಂದು ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎದುರು ಯಶಸ್ವಿ ಹೋರಾಟ ನಡೆಸಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಅಭಿನಂದಿಸಿದ ಲಿಂಗಪ್ಪ, ಕೆಲ ಕಾಂಗ್ರೆಸ್ ನಾಯಕರು ಬೆಂಬಲಿಸಿದ ಕಾರಣ ಆಕೆಗೆ ಜಯ ಸಾಧ್ಯವಾಯಿತು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


