ತವರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು? ಕಳಪೆ ಸಾಧನೆಯಿಂದ ಕುಂದುತ್ತಿದೆಯೇ ಸಿದ್ದು ವರ್ಚಸ್ಸು!
ಮ್ಮ ತವರು ಜಿಲ್ಲೆಯಾದ ಮೈಸೂರು, ಚಾಮರಾಜನಗರ ಹಾಗೂ ಬಾಗಲಕೋಟೆಯಲ್ಲಿನ ಸೋಲು ಸಿದ್ದರಾಮಯ್ಯಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಇದು ಕಾಂಗ್ರೆಸ್ ಗೆ ಹೊಡೆತ ನೀಡಿದೆ .

Published On :
ಮೈಸೂರು: ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನದಲ್ಲಿ ಜಯಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದೆ, ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಸಾಧನೆ ತುಂಬಾ ಬೇಸರ ಉಂಟು ಮಾಡಿದೆ. ಇದರಿಂದ ಸಿದ್ದರಾಮಯ್ಯ ಅವರ ವರ್ಚಸ್ಸು ಕುಸಿಯುತ್ತಿದೆಯೇ ಎಂಬ ಅನುಮಾನ ಮೂಡುವಂತೆ ಮಾಡಿದೆ.
ತಮ್ಮ ತವರು ಜಿಲ್ಲೆಯಾದ ಮೈಸೂರು, ಚಾಮರಾಜನಗರ ಹಾಗೂ ಬಾಗಲಕೋಟೆಯಲ್ಲಿನ ಸೋಲು ಸಿದ್ದರಾಮಯ್ಯಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಇದು ಕಾಂಗ್ರೆಸ್ ಗೆ ಹೊಡೆತ ನೀಡಿದೆ ಎಂದು ಹೇಳಲಾಗುತ್ತಿದೆ.
ಮೋದಿ ಅಲೆಯಿಂದಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಗೆಲ್ಲಲಾಗಲಿಲ್ಲ, ಬಿಜೆಪಿಯ ರಾಷ್ಟ್ರೀಯ ವಿಷಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು, ಜೊತೆಗೆ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳ ಸೋಲು ಸಿದ್ದರಾಮಯ್ಯ ಅವರ ನಿದ್ದೆಗೆಡಿಸಿದೆ. ಚಾಮರಾಜನಗರದಲ್ಲಿ ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಆರ್ ಧ್ರುವನಾರಾಯಣ ಅವರನ್ನು ಸೋಲಿಸಿದ್ದಾರೆ.
ಇನ್ನೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಭಾರೀ ಮತಗಳ ಅಂತರದಿಂದ ಸೋತಿರುವುದು ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ.ತಮ್ಮ ಸ್ವಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಸೋಲು ಸಿದ್ಧುಗೆ ದಿಗ್ಬ್ರಮೆ ಮೂಡಿಸಿದೆ, ಅಹಿಂದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗಿಲ್ಲ,
ತಮ್ಮ ತವರು ಜಿಲ್ಲೆಯಾದ ಮೈಸೂರು, ಚಾಮರಾಜನಗರ ಹಾಗೂ ಬಾಗಲಕೋಟೆಯಲ್ಲಿನ ಸೋಲು ಸಿದ್ದರಾಮಯ್ಯಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಇದು ಕಾಂಗ್ರೆಸ್ ಗೆ ಹೊಡೆತ ನೀಡಿದೆ ಎಂದು ಹೇಳಲಾಗುತ್ತಿದೆ.
ಮೋದಿ ಅಲೆಯಿಂದಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಗೆಲ್ಲಲಾಗಲಿಲ್ಲ, ಬಿಜೆಪಿಯ ರಾಷ್ಟ್ರೀಯ ವಿಷಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು, ಜೊತೆಗೆ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳ ಸೋಲು ಸಿದ್ದರಾಮಯ್ಯ ಅವರ ನಿದ್ದೆಗೆಡಿಸಿದೆ. ಚಾಮರಾಜನಗರದಲ್ಲಿ ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಆರ್ ಧ್ರುವನಾರಾಯಣ ಅವರನ್ನು ಸೋಲಿಸಿದ್ದಾರೆ.
ಇನ್ನೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾನಿ ಭಾರೀ ಮತಗಳ ಅಂತರದಿಂದ ಸೋತಿರುವುದು ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ.ತಮ್ಮ ಸ್ವಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಸೋಲು ಸಿದ್ಧುಗೆ ದಿಗ್ಬ್ರಮೆ ಮೂಡಿಸಿದೆ, ಅಹಿಂದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗಿಲ್ಲ,
ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸೋಲು ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ ಇನ್ನೂ ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಭಾರೀ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಲೋಕಸಭೆ ಚುನಾವಣಾ ಫಲಿತಾಂಶ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ತಂದಿರುವುದು ನಿಜ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


