ರಾಜಕೀಯ

ಕಾಂಗ್ರೆಸಿಗರ ಹತಾಶೆಯ ನಡುವೆಯೇ ಟ್ವೀಟ್ ನಲ್ಲಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ ರೋಷನ್ ಬೇಗ್!

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರೋಷನ್ ಬೇಗ್ ಮೋದಿಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸಿಗರ ಹತಾಶೆಯ ನಡುವೆಯೇ ಟ್ವೀಟ್ ನಲ್ಲಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ ರೋಷನ್ ಬೇಗ್!
ರೋಷನ್ ಬೇಗ್
Published On :
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರೋಷನ್ ಬೇಗ್ ಮೋದಿಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ಬೇಗ್ ಈಗ ಮತ್ತೆ ಸರಣಿ ಟ್ವೀಟ್ ಗಳ ಮೂಲಕ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ಶನಿವಾರ ರಾತ್ರಿ ಸರಣಿ ಟ್ವೀಟ್ ಮಾಡಿದ ರೋಷನ್ ಬೇಗ್ ಕೇಂದ್ರದಲ್ಲಿ ಬಹುಮತ ಪಡೆದದ್ದಕ್ಕೆ ಮೋದಿಗೆ ಶುಭಾಶಯ ಹೇಳಿದ್ದಲ್ಲದೆ "ಇದು ಜನರ ಮಾತು, ದೇಶದ ಪ್ರಗತಿಗಾಗಿ ಪ್ರಧಾನಿ ಕೆಲಸ ಮಾಡಲಿದ್ದಾರೆ ಎಂದು ನಾನು ಭಾವಿಸಿದ್ದೇನೆ. 
"ದೇಶದ ಅಲ್ಪಸಂಖ್ಯಾತರ ಬಗೆಗೆ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನರೇಂದ್ರ ಮೋದಿ ಹೇಳಿಕೆ ಸ್ವಾಗತಾರ್ಹ. ಅಧಿಕಾರಕ್ಕೇರುವ ಮುನ್ನವೇ ಸಾಮಾಜಿಕ ಏಕತೆಯ ಬಗೆಗೆ ಅವರಾಡಿದ ಮಾತುಗಳಿಂಡ ಉತ್ತೇಜಿತನಾಗಿದ್ದೇನೆ. 
"ಎಲ್ಲರನ್ನೂ ಒಳಗೊಂಡು ಭಾರತದ ಅಭಿವೃದ್ದಿ ನಡೆಸುತ್ತಾರೆ ಎಂದು ನನಗೆ ನಂಬಿಕೆ ಇದೆ.ಭಾರತದ ರಾಜಕೀಯದಲ್ಲಿನ ಬದಲಾವಣೆಗೆ ಸ್ವಾಗತ" ರೋಷನ್ ಬೇಗ್ ಟ್ವೀಟ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.