ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರಿಗೆ ಬಿಜೆಪಿಯಿಂದ ಗೋವಾದಲ್ಲಿ ರೂಂ ಬುಕ್ಕಿಂಗ್
ಆಪರೇಷನ್ ಕಮಲ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಗೋವಾದ ಕಾಂಡೊಲಿಮ್ ನ ತಾಜ್ ಫೋರ್ಟ್ ...

Published On :
ಬೆಳಗಾವಿ: ಆಪರೇಷನ್ ಕಮಲ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಗೋವಾದ ಕಾಂಡೊಲಿಮ್ ನ ತಾಜ್ ಫೋರ್ಟ್ ಅಗೌಡ ಮತ್ತು ಕಿಂಗ್ ಫಿಶರ್ ವಿಲ್ಲಾ ಹೊಟೇಲ್ ಗಳಲ್ಲಿ 40 ರೂಂಗಳು ಬುಕ್ ಆಗಿವೆ. ಕೆಲವು ಕಾಂಗ್ರೆ ಸ್ ಮತ್ತು ಜೆಡಿಎಸ್ ನ ಅತೃಪ್ತ ಶಾಸಕರು ಯಾವುದೇ ಕ್ಷಣದಲ್ಲಿಯೂ ಹೊಟೇಲ್ ಗೆ ಹೋಗುವ ಸಾಧ್ಯತೆಯಿದೆ.
ಈ ಮಧ್ಯೆ ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ಹಲವು ಅತೃಪ್ತ ಶಾಸಕರನ್ನು ಸಂಪುಟಕ್ಕೆ ಸೇರಿಸಲು ವೇದಿಕೆ ಸಿದ್ದವಾಗುತ್ತಿದೆ. ಬೆಳಗಾವಿಯ ಶಾಸಕ ಸುರೇಶ್ ಅಂಗಡಿ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಮದ್ಯೆ ಬಿಜೆಪಿ ನಾಯಕರ ಒಂದು ವರ್ಗ ಸರ್ಕಾರವನ್ನು ಅಸ್ಥಿರಗೊಳಿಸಲು ಸರಿಯಾದ ಸಮಯಕ್ಕೆ ಕಾಯುತ್ತಿದೆ. ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಬಿಜೆಪಿಯ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


