ಸರ್ಕಾರದ ಪುನರಚನೆ, ಸಂಪುಟ ವಿಸ್ತರಣೆ ಯಾವುದೂ ಇಲ್ಲ: ಸಿದ್ದರಾಮಯ್ಯ
ರಾಜ್ಯ ಸರ್ಕಾರ ಪುನರಚನೆ ಅಥವಾ ಸಂಪುಟ ವಿಸ್ತರಣೆ ಯಾವುದೂ ಇಲ್ಲ. ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ಮೈಸೂರು: ರಾಜ್ಯ ಸರ್ಕಾರ ಪುನರಚನೆ ಅಥವಾ ಸಂಪುಟ ವಿಸ್ತರಣೆ ಯಾವುದೂ ಇಲ್ಲ. ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸಿ.ಎಸ್. ಶಿವಳ್ಳಿ ನಿಧನದಿಂದ ತೆರವಾಗಿರುವ ಸಚಿವ ಸ್ಥಾನ ಭರ್ತಿ ಮಾಡಲು ಮಾತ್ರ ನಿರ್ಧಾರವಾಗಿದೆ ಹೊರತು ಯಾವ ಸರ್ಕಾರ ಪುನರಚನೆ, ಸಂಪುಟ ವಿಸ್ತರಣೆ ಬಗೆಗೆ ತೀರ್ಮಾನಿಸಿಲ್ಲ ಎಂದು ಅವರು ಹೇಳಿದ್ದಾರೆ.
ಇದಕ್ಕೆ ಮುನ್ನ ರಾಜ್ಯ ಮೈತ್ರಿ ಸರ್ಕಾರದಲ್ಲಿ ತೋರಿರುವ ಬಿಕ್ಕಟ್ಟ್ನ ಶಮನಕ್ಕಾಗಿ ಸಿಎಂ ಕುಮಾರಸ್ವಾಮಿ ಸಂಪುಟ ವಿಸ್ತರಣೆ ಮಾಡುವ ಮೂಲಕ ಅತೃಪ್ತರ ಬಾಯಿ ಮುಚ್ಚಿಸಲಿದ್ದಾರೆ ಎನ್ನಲಾಗಿತ್ತು.
ಮೈಸೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಸಿದ್ದರಾಮಯ್ಯ "ಅಂತಹಾ ಯೋಜನೆಗಳೇನೂ ಇಲ್ಲ, ಕಾಂಗ್ರೆಸ್ ನ ಒಂದು, ಜೆಡಿಎಸ್ ನ ಎರಡು ಸಚಿವ ಸ್ಥಾನ ಖಾಲಿ ಇದೆ. ನಾವು ಒಂದು ಸ್ಥಾನ ಭರ್ತಿ ಮಾಡಲಿದ್ದೇವೆ. ಆದರೆ ಜೆಡಿಎಸ್ ಬಗೆಗೆ ಗೊತ್ತಿಲ್ಲ" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


