ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಚ್ ಡಿಕೆ, ಪರಮೇಶ್ವರ್
ನಾಳೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ...

ಬೆಂಗಳೂರು: ನಾಳೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಭಾಗಿಯಾಗಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ಹೇಳಿವೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಎಲ್ಲ ಮುಖ್ಯಮಂತ್ರಿಗಳಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ ಹೋಗಿದೆ.
ಇದುವರೆಗೂ ಬಹಳ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಹ ಮೋದಿ ಪ್ರಮಾಣ ಸಮಾರಂಭಕ್ಕೆ ಹೋಗುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ನೂತನವಾಗಿ ಆಯ್ಕೆಯಾದ ಸಂಸದರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಲವರು ಇಂದು ತೆರಳುತ್ತಿದ್ದು, ಮತ್ತೆ ಕೆಲವರು ನಾಳೆ ಹೋಗಲಿದ್ದಾರೆ. ಹೀಗಾಗಿ ದೆಹಲಿಗೆ ತೆರಳುವ ಎಲ್ಲ ವಿಮಾನಗಳು ತುಂಬಿ ತುಳುಕುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


