ರಂಗೇರುತ್ತಿದೆ ಉಪ ಚುನಾವಣಾ ಕದನ: ಅಖಾಡದಲ್ಲಿ ಮಾಜಿ ಸ್ಪೀಕರ್, ಶಾಸಕರ ಪತ್ನಿ
ತೀವ್ರ ಕುತೂಹಲ ಕೆರಳಿಸಿರುವ ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ. ಚುನಾವಣೆ ರಂಗೇರುತ್ತಿದ್ದಂತೆ ಉಪ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ. ಚುನಾವಣೆ ರಂಗೇರುತ್ತಿದ್ದಂತೆ ಉಪ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೈತ್ರಿ ಮುರಿದು ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿರುವ ಕಾಂಗ್ರೆಸ್ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ರಾಜ್ಯದ 15 ಕ್ಷೇತ್ರಗಳ ಚುನಾವಣೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.
ಈ ಪಟ್ಟಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಉಪಚುನಾವಣೆ ಕಣಕ್ಕೆ ಇಳಿಯಲಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಿಂದ ಭೀಮಣ್ಣ ನಾಯಕ್, ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಬಿ.ಎಚ್.ಬನ್ನಿಕೋಡ, ರಾಣೆಬೆನ್ನೂರು ಕ್ಷೇತ್ರದಿಂದ ಕೆ.ಬಿ.ಕೋಳಿವಾಡ ಹಾಗೂ ಚಿಕ್ಕಬಳ್ಳಾಪುರದಿಂದ ಎಂ.ಆಂಜನಪ್ಪ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.
ಉಳಿದಂತೆ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದಿಂದ ಎಂ.ನಾರಾಯಣಸ್ವಾಮಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಎಂ.ಶಿವರಾಜ್, ಹೊಸಕೋಟೆಯಿಂದ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ ಸುರೇಶ್ ಹಾಗೂ ಮೈಸೂರು ಜಿಲ್ಲೆ ಹುಣಸೂರು ಕ್ಷೇತ್ರದಿಂದ ಎಚ್.ಪಿ.ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.
ಮುಂದಿನ ದಿನಗಳಲ್ಲಿ ಉಳಿದ 7 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ರೋಷನ್ ಬೇಗ್ ರಾಜಿನಾಮೆಯಿಂದ ತೆರವಾಗಿರುವ ಶಿವಾಜಿನಗರ ಕ್ಷೇತ್ರಕ್ಕೆ ಎಂಎಲ್ ಸಿ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ,.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


