ರಾಜಕೀಯ

ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡಿದರೆ ಒಳ್ಳೆಯದು: ಬಸವರಾಜ್ ಹೊರಟ್ಟಿ

ರಾಜಕೀಯದಲ್ಲಿ ಯಾರು ಶಾಶ್ವತ ಶತೃವೂ ಅಲ್ಲ, ಗೆಳೆಯರೂ ಅಲ್ಲ. ರಾಜ್ಯದಲ್ಲಿ ನೆರೆ ಹಿನ್ನೆಲೆಯಲ್ಲಿ ಮರು ಚುನಾವಣೆ ಬೇಡ ಎಂಬುದಕ್ಕಾಗಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಬಹುದು ಎಂದು ಜೆಡಿಎಸ್ ನಾಯಕ...

ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡಿದರೆ ಒಳ್ಳೆಯದು: ಬಸವರಾಜ್ ಹೊರಟ್ಟಿ
ಬಸವರಾಜ್ ಹೊರಟ್ಟಿ
Published On :

ಹುಬ್ಬಳ್ಳಿ: ರಾಜಕೀಯದಲ್ಲಿ ಯಾರು ಶಾಶ್ವತ ಶತೃವೂ ಅಲ್ಲ, ಗೆಳೆಯರೂ ಅಲ್ಲ. ರಾಜ್ಯದಲ್ಲಿ ನೆರೆ ಹಿನ್ನೆಲೆಯಲ್ಲಿ ಮರು ಚುನಾವಣೆ ಬೇಡ ಎಂಬುದಕ್ಕಾಗಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಬಹುದು ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರು ಶನಿವಾರ ಹೇಳಿದ್ದಾರೆ. 

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ, ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಆಗಬಾರದು. ಬಿಜೆಪಿ ಸರ್ಕಾರ ಮುಂದುವರಿಯಲಿ ಎನ್ನುವುದು ಉತ್ತಮ ವಿಚಾರ. ಬಹುತೇಕ ಜೆಡಿಎಸ್ ಶಾಸಕರು ಬಿಜೆಪಿಗೆ ಬೆಂಬಲ ಕೊಡುವುದರ ಪರವಾಗಿ ನಿಲುವು ಹೊಂದಿದ್ದಾರೆ. ಕುಮಾರಸ್ವಾಮಿಯವರು ಎಲ್ಲರ ಸಭೆ ಕರೆದು ಒಟ್ಟಾಗಿ ಚರ್ಚಿಸಿ, ತೀರ್ಮಾನಿಸಬೇಕು ಎಂದು ತಿಳಿಸಿದರು.

ಪಕ್ಷದಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇವೆಗೌಡರ ಜೊತೆ ಮಾತನಾಡಿದ್ದೇನೆ ಎಂದು ಹೊರಟ್ಟಿ ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ, ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜ. ಸಿಎಂ ಯಡಿಯೂರಪ್ಪ ಅವರಿಗೆ ಅನರ್ಹ ಶಾಸಕರ ಬಗ್ಗೆ ಇರುವ ಕಾಳಜಿಗೆ ನನ್ನ ಸಹಮತವಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.