ರಾಜಕೀಯ

ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿಲ್ಲ: ಸಚಿವ ವಿ.ಸೋಮಣ್ಣ

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಪ್ರವಾಹ ಬರುತ್ತದೆ. ಅದೇ ಬೇರೆ ಪಕ್ಷದ ನಾಯಕರು ಮುಖ್ಯಮಂತ್ರಿ ಆದರೆ ಬರಗಾಲ ಬರುತ್ತದೆ ಎಂದು ಸಚಿವ ವಿ. ಸೋಮಣ್ಣ ಲೇವಡಿ ಮಾಡಿದ್ದಾರೆ.

ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿಲ್ಲ: ಸಚಿವ ವಿ.ಸೋಮಣ್ಣ
ಸಂಗ್ರಹ ಚಿತ್ರ
Published On :

ಬೆಳಗಾವಿ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಪ್ರವಾಹ ಬರುತ್ತದೆ. ಅದೇ ಬೇರೆ ಪಕ್ಷದ ನಾಯಕರು ಮುಖ್ಯಮಂತ್ರಿ ಆದರೆ ಬರಗಾಲ ಬರುತ್ತದೆ ಎಂದು ಸಚಿವ ವಿ. ಸೋಮಣ್ಣ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರ ಪ್ಪ ಆರು ಬಾರಿ ನೆರೆ ಸಂತ್ರ ಸ್ಥರ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿ ನೆರೆ ಸಂತ್ರಸ್ಥರಿಗೆ ಹೆಚ್ಚಿನ ಪರಿಹಾರ ನೀಡುವ ಕೆಲಸವನ್ನು ಮಾಡಿದ್ದಾರೆ.ಸಂತ್ರಸ್ತರ ಪರಿಹಾರ ಹಣ ಮಧ್ಯವರ್ತಿಗಳಿಗೆ ಹೋಗಿಲ್ಲ.ಅದು ಅವರ ಖಾತೆಗೆ ನೇರವಾಗಿ ಹೋಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ವಾಸ್ತವ ವಿಚಾರ ತಿಳಿಸಿದ್ದಾರೆ, ವಿಡಿಯೋ ವೈರಲ್ ಆಗಬಾರದಿತ್ತು
ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ವಿಡಿಯೋ ವೈರಲ್ ಆಗಿರುವುದು ನನ್ನ ಮನಸ್ಸಿಗೆ ಬಹಳ ನೋವು ತಂದಿದೆ. ಅನರ್ಹ ಶಾಸಕರಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು, ಅವರು ಬಿಜೆಪಿ ಸೇರುತ್ತಾರೆ ಎಂದು ಹೇಳಿಲ್ಲ. ಅವರ ಪಕ್ಷದ ಅವ್ಯವಸ್ಥೆಯಿಂದ ರಾಜೀನಾಮೆ ನೀಡಿದ್ದಾರೆ. ಅದರಿಂದ ಸಹಜವಾಗಿ ನಮ್ಮ ಸರ್ಕಾರ ಬಂದಿದೆ ಎಂದಿದ್ದಾರೆ. ಅದನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿರುವುದು ನೋವು ತಂದಿದೆ. ಈ ಪ್ರಕರಣವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಶಿಸ್ತಿನ ಪಕ್ಷದಲ್ಲಿ ಈ ರೀತಿ ಆಗಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.