ಬೇಕಾಬಿಟ್ಟಿ ವರ್ಗಾವಣೆಯೇ ಬಿಜೆಪಿ ಸರ್ಕಾರದ 100 ದಿನಗಳ ಸಾಧನೆ: ರೇವಣ್ಣ ಲೇವಡಿ
ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು.

ಬೆಂಗಳೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು. ಇದರಿಂದ ದೇವೇಗೌಡರಿಗೆ ನಷ್ಟವಾಗಿಲ್ಲ. ರಾಜ್ಯದ ಜನತೆಗೆ ನಷ್ಟವಾಯಿತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವ್ಯಾಖ್ಯಾನಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ 14 ತಿಂಗಳ ಕೆಲಸದ ಬಗ್ಗೆ ಕಾಂಗ್ರೆಸ್ ಸ್ಮರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಗೌಡರು ಲೋಕಸಭೆಯಲ್ಲಿ ಸೋತಿದ್ದಾಯಿತು. ಈಗ ಎರಡೂ ಪಕ್ಷಗಳೂ ದೇವೇಗೌಡರು ಈ ರಾಜ್ಯಕ್ಕೆ ಏನೂ ಸಾಧನೆ ಮಾಡಿಲ್ಲ ಎಂದು ಬಿಂಬಿಸಲು ಹೊರಟಿವೆ. ನೂರು ದಿನಗಳ ಸಾಧನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


