ಬಿಎಸ್'ವೈ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು?: ಉರಿಯುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು? ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದರೇ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯಲ್ಲಿ ಉರಿಯುತ್ತಿರುವ ಬೆಂಕಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತುಪ್ಪ ಸುರಿದಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು? ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದರೇ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯಲ್ಲಿ ಉರಿಯುತ್ತಿರುವ ಬೆಂಕಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತುಪ್ಪ ಸುರಿಯುವ ಪ್ರಯತ್ನ ಮಾಡಿದ್ದಾರೆ.
ಆಡಿಯೋ ರೇಪ್ ಎಂಬ ಬಾಂಬ್ ನಲ್ಲಿ ಯಡಿಯೂರಪ್ಪ ಸಿಲುಕಿಕೊಂಡಿದ್ದಾರೆ. ಸಭೆಯಲ್ಲಿ ಇದ್ದಿದ್ದು ಬಿಜೆಪಿಯವರೇ ವಿನಃ ಅನ್ಯ ಪಕ್ಷದವರಲ್ಲ. ಹೀಗಾಗಿ ಆಡಿಯೋ ರೆಕಾರ್ಡ್ ಮಾಡಿದ್ದು ಬಿಜೆಪಿಯವರೇ ಆಗಿರುತ್ತಾರೆ. ಸಭೆಯಲ್ಲಿ ಯಡಿಯೂರಪ್ಪ ಬಿಟ್ಟರೆ, ಕಟೀಲ್, ಸವದಿ, ಬೊಮ್ಮಾಯಿ ಇದ್ದರು. ಹೀಗಾಗಿ ಈ ಮೂವರಲ್ಲೇ ಯಾರೋ ಒಬ್ಬರು ಆಡಿಯೋ ರೆಕಾರ್ಡ್ ಮಾಡಿರುತ್ತಾರೆಂದು ಸಿದ್ದರಾಮಯ್ಯ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅನುಮಾನದ ಪ್ರಶ್ನೆ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿಯವಂತಾಗಿದೆ.
ಇದರಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಹೊಸ ಬಾಂಬ್ ಸಿಡಿಸಿದ್ದು, ಆಡಿಯೋ ರೆಕಾರ್ಡ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಎಂದು ಆರೋಪಿಸಿದ್ದಾರೆ.
ಆಡಿಯೋ ರೆಕಾರ್ಡ್ ಮಾಡಿರುವ ಕಟೀಲ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಬಿಜೆಪಿಯು ಅನರ್ಹ ಶಾಸಕರ ಬಗ್ಗೆ ಮೃದುಧೋರಣೆ ತೋರುತ್ತಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಡಿಯೋದಲ್ಲಿ ಪ್ರಸ್ತಾಪಿಸಿದ್ದರು. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚಿತ್ರೀಕರಿಸಿದ ಈ ವಿಡಿಯೋವನ್ನು ಕಟೀಲ್ ಬಹಿರಂಗಗೊಳಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಗರಂ ಆದ ಬಳಿಕ ಇದೀಗ ಯಡಿಯೂರಪ್ಪ ಕೂಡ ಉಲ್ಟಾ ಹೊಡೆಯುತ್ತಿದ್ದಾರೆಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


