ನಾನು ಮತ್ತೆ ಸಿಎಂ ಆಗುತ್ತೇನೆಂಬ ಭಯದಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ : ಸಿದ್ದರಾಮಯ್ಯ
ಮತ್ತೆ ನಾನು ಸಿಎಂ ಆಗುತ್ತೇನೆ ಎಂಬ ಭಯಕ್ಕೆ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್ನಲ್ಲಿ ಕಾಂಗ್ರೆಸ್ ವಾದಕ್ಕೆ ಹಿನ್ನಡೆಯಾಗಿಲ್ಲ, ಪ್ರತ್ಯೇಕ ವಿಚಾರಣೆಗೆ ಕೊರ್ಟ್ಗೆ ಮನವಿ ಮಾಡಿದ್ದೆವು ಇದಕ್ಕೆ ಸುಪ್ರೀಂ ಒಪ್ಪಿಲ್ಲ, ಹೀಗಾಗಿ ಇದಕ್ಕೆ ಹಿನ್ನಡೆ ಹೇಗಾಗುತ್ತೆ? ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಉಡುಪಿ: ಮತ್ತೆ ನಾನು ಸಿಎಂ ಆಗುತ್ತೇನೆ ಎಂಬ ಭಯಕ್ಕೆ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್ನಲ್ಲಿ ಕಾಂಗ್ರೆಸ್ ವಾದಕ್ಕೆ ಹಿನ್ನಡೆಯಾಗಿಲ್ಲ, ಪ್ರತ್ಯೇಕ ವಿಚಾರಣೆಗೆ ಕೊರ್ಟ್ಗೆ ಮನವಿ ಮಾಡಿದ್ದೆವು ಇದಕ್ಕೆ ಸುಪ್ರೀಂ ಒಪ್ಪಿಲ್ಲ, ಹೀಗಾಗಿ ಇದಕ್ಕೆ ಹಿನ್ನಡೆ ಹೇಗಾಗುತ್ತೆ? ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ನಗರದಲ್ಲಿ ನಡೆದ ಮಹಾತ್ಮ ಗಾಂಧಿ 150 ಸಮಾವೇಶದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಡಿಯೋವನ್ನು ಸುಪ್ರೀಂಕೋರ್ಟ್ ಪರಿಶೀಲಿಸುವುದಾಗಿ ಹೇಳಿದೆ. ಪ್ರತ್ಯೇಕ ವಿಚಾರಣೆ ಬೇಡ,ತೀರ್ಪಿನ ವೇಳೆ ಆಡಿಯೋವನ್ನು ಪರಿಗಣಿಸು ವುದಾಗಿ ತಿಳಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿಗೆ ಸಿದ್ದರಾಮಯ್ಯ ಅಂದ್ರೆ ಭಯ! ನಾನು ಬಿಜೆಪಿನ ಸೋಲಿಸುತ್ತೇನೆ ಎಂದು ಭಯ. ಅದಕ್ಕಾಗಿಯೇ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಯಡಿಯೂರಪ್ಪ ಆಡಿಯೋ ಪ್ರಕರಣದಲ್ಲಿ ಆದದ್ದೂ ಅದುವೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಅನರ್ಹ ಶಾಸಕ ಡಾ. ಸುಧಾಕರ್ ಹೇಳಿಕೆ ಬಗೆಗೆ ಪ್ರತಿಕ್ರಯಿಸಿದ ಸಿದ್ದರಾಮಯ್ಯ ಸುಧಾಕರ್ ಹೇಳೀದ್ದು ಸತ್ಯ. ಅವರಂತಹಾ ಹಲವರು ಪಕ್ಷಾಂತರ ಮಾಡಿದ್ದ ಕಾರಣ ನಾನು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪೀಕರ್ ಅವರಿಗೆ ದೂರು ಸಲ್ಲಿಸಿದ್ದೆವು. ಹಾಗಾಗಿ ಅವರು ಅನರ್ಹರಾಗಲು ನಾವೇ ಕಾರಣ ಎಂಬುದು ಸತ್ಯ ಎಂದಿದ್ದಾರೆ.
ಯಡಿಯೂರಪ್ಪ ತಾವೇ ಟಿಪ್ಪು ಎಂದಿದ್ರು!
ಟಿಪ್ಪು ಜಯಂತಿ ವಿಚಾರವಾಗಿ ಸಿಎಂ ಯಡಿಯೂರಪ್ಪ ಕಾಲೆಳೆದ ಸಿದ್ದರಾಮಯ್ಯ ಯಡಿಯೂರಪ್ಪ ಕೆಜೆಪಿ ಅಧ್ಯಕ್ಷರಾಗಿದ್ದ ವೇಳೆ ತಾವೇ ಟಿಪ್ಪು ವೇಷ ಹಾಕಿಕೊಂಡು , ಕೈಯಲ್ಲಿ ಕತ್ತಿ ಹಿಡಿದುಕೊಂಡು,ನಿಂತಿದ್ದರು. ಪಕ್ಕದಲ್ಲಿ ಶೋಭಾ ಕರಂದ್ಲಾಜೆ ಸಹ ಇದ್ದರು. ಆಗ ಯಡಿಯೂರಪ್ಪ 'ನಾನೇ ಟಿಪ್ಪು' ಎಂದು ಹೇಳಿದ್ದರು ಎಂದು ವ್ಯಂಗ್ಯವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


