ಪಕ್ಷ ವಿರೋಧಿ ಚಟುವಟಿಕೆ ಆರೋಪ: ಜೆಡಿಎಸ್ ಎಂಎಲ್‌ಸಿ ಪುಟ್ಟಣ್ಣ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಪುಟ್ಟಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಜೆಡಿಎಸ್‍ನಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಪಕ್ಷ್ದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರಲಿಲ್ಲ ಎನ್ನಲಾಗಿದೆ. ಅಲ್ಲದೆ ಕೆಲ ದಿನಗಳ ಹಿಂದೆ ರಾಮನಗರದಲ್ಲಿ ಮಾತನಾಡಿದ್ದ ಪುಟ್ಟಣ್ಣ "ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ." ಎಂದೂ ಮುಂದಿನ ನಡೆ ಬಗೆಗೆ ಇನ್ನೂ ಯೋಚಿಸಿಲ್ಲ ಎಂದೂ ಹೆಳಿಕೊಂಡಿದ್ದರು.
ಪುಟ್ಟಣ್ಣ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


