ರಾಜಕೀಯ

ಇಲ್ಲ, ಇಲ್ಲ, ಯಡಿಯೂರಪ್ಪ ಸರ್ಕಾರಕ್ಕೆ ನನ್ನ ಬೆಂಬಲವಿಲ್ಲ: ದೇವೇಗೌಡ ಸ್ಪಷ್ಟನೆ

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜ್ಯ. ಬಿಜೆಪಿ ಸರ್ಕಾರದ ಬಗ್ಗೆ ಮೃಧು ದೋರಣೆ ತಳೆದಿದ್ದರೇ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡ, ತಮಗೆ ಬಿಜೆಪಿ ಸರ್ಕಾರದ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ, ಯಡಿಯೂರಪ್ಪ ಸರ್ಕಾರಕ್ಕೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಲ್ಲ, ಇಲ್ಲ, ಯಡಿಯೂರಪ್ಪ ಸರ್ಕಾರಕ್ಕೆ ನನ್ನ ಬೆಂಬಲವಿಲ್ಲ: ದೇವೇಗೌಡ ಸ್ಪಷ್ಟನೆ
ದೇವೇಗೌಡ
Published On :

ಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜ್ಯ. ಬಿಜೆಪಿ ಸರ್ಕಾರದ ಬಗ್ಗೆ ಮೃಧು ದೋರಣೆ ತಳೆದಿದ್ದರೇ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡ, ತಮಗೆ ಬಿಜೆಪಿ ಸರ್ಕಾರದ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ, ಯಡಿಯೂರಪ್ಪ ಸರ್ಕಾರಕ್ಕೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೆಲ ಮಾಧ್ಯಮಗಳಲ್ಲಿ ದೇವೇಗೌಡರು ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ ಎಂಬ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿಲ್ಲ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಸುದ್ದಿ ಬಿತ್ತರಿಸಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಕೆಡವಲು ಜೆಡಿಎಸ್ ಯತ್ನಿಸುವುದಿಲ್ಲ, ಹೀಗಾಗಲೇ ಪ್ರವಾಹ ಸಂತ್ರಸ್ತರು ಸರಿಯಾದ ಪರಿಹಾರ ಸಿಗದೇ ಬವಣೆ ಪಡುತ್ತಿದ್ದಾರೆ, ಇಂತಹ ಸಮಯದಲ್ಲಿ ಮತ್ತೆ ಚುನಾವಣೆಗೆ ಹೋಗುವುದು ಸರಿಯಲ್ಲ, ಬಿದೆಪಿ ಸರ್ಕಾರಕ್ಕೆ ತಮ್ಮ ಬೆಂಬಲವಿದೆ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದರು.

ಆದರೆ ಮಾಜಿ ಪ್ರಧಾನಿ ದೇವೇಗೌಡರು ಕುಮಾರಸ್ವಾಮಿ ಹೇಳಿಕೆಗೆ ತದ್ವಿರುದ್ದವಾಗಿ ಪ್ರತಿಕ್ರಿಯಿಸಿದ್ದಾರೆ. ಸದ್ಯ ಕುಮಾರಸ್ವಾಮಿ ಲಂಡನ್  ಪ್ರವಾಸದಲ್ಲಿದ್ದಾರೆ ಎಂದು ಹೇಳಿರುವ ದೇವೇಗೌಡರು, ನಮ್ಮ ಪಕ್ಷದ ಯುವ ಮುಖಂಡನ ಬಾಯಿಗೆ ಪಿಸ್ತೂಲು ಇಟ್ಟು ಹಿಂಸಿಸಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಆಗುತ್ತಿರುವ ಕಿರುಕುಳ ನಿಲ್ಲಬೇಕು. ಇಲ್ಲದಿದ್ದರೆ ಸಿಎಂ ಮನೆ ಎದುರು ನಾನೇ ನ.15ರಂದು ಧರಣಿ ಮಾಡುತ್ತೇನೆ. ರಾಜ್ಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.