ರಾಮಮಂದಿರ ರಾಷ್ಟ್ರಮಂದಿರದಂತೆ ನಿರ್ಮಾಣವಾಗಲಿ-ನಳಿನ್ ಕುಮಾರ್ ಕಟೀಲ್
ರಾಮ ಮಂದಿರ ನಿರ್ಮಾಣ ಮಾಡಲು ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದ್ದು, ರಾಮಮಂದಿರ ರಾಷ್ಟ್ರ ಮಂದಿರದಂತೆ ನಿರ್ಮಾಣವಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಬೆಂಗಳೂರು: ರಾಮ ಮಂದಿರ ನಿರ್ಮಾಣ ಮಾಡಲು ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದ್ದು, ರಾಮಮಂದಿರ ರಾಷ್ಟ್ರ ಮಂದಿರದಂತೆ ನಿರ್ಮಾಣವಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಪೀಠ ಸರ್ವಸಮ್ಮತ ಐತಿಹಾಸಿಕ ತೀರ್ಪು ನೀಡಿದ್ದು, ಬಿಜೆಪಿ ಸರ್ವಾನುಮತದಿಂದ ಸ್ವಾಗತಿಸುತ್ತದೆ.
ಪಂಚಪೀಠದ ಐವರು ನ್ಯಾಯಾಧೀಶರು ಒಟ್ಟಾಗಿ ಭಾರತದ ಏಕತೆಯನ್ನು ಎತ್ತಿಹಿಡಿಯುವ ಕೆಲಸ ಮಾಡಿದ್ದಕ್ಕೆ ನ್ಯಾಯಾಧೀಶರನ್ನು ಪಕ್ಷ ಅಭಿನಂದಿಸುತ್ತದೆ. ಇವರ ತೀರ್ಪು ನ್ಯಾಯಾಲಯದ ಘನತೆ ಹಾಗೂ ಸತ್ಯಮೇವ ಜಯತೆಯನ್ನು ಎತ್ತಿಹಿಡಿದಂತಾಗಿದೆ ಎಂದರು.
ಎಲ್ಲಾ ಮತ ಪಂಥಗಳು ಸೇರಿ ರಾಮಮಂದಿರ ನಿರ್ಮಾಣ ಮಾಡಬೇಕು. ಇದರಲ್ಲಿ ರಾಜಕಾರಣ ಮಾಡುವ ಅವಶ್ಯಕತೆಯಾಗಲೀ ಅನಿವಾರ್ಯತೆಯಾಗಲೀ ಪಕ್ಷಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


