ಮುಖ್ಯಮಂತ್ರಿ ಪದವಿ ಕೊಟ್ಟರೂ ಮತ್ತೆ ಬಿಜೆಪಿಗೆ ಹೋಗುವುದಿಲ್ಲ: ರಾಜು ಕಾಗೆ ಸ್ಪಷ್ಟನೆ
ಮಾನಸಿಕವಾಗಿ ನಾನು ಬಿಜೆಪಿಯಿಂದ ದೂರ ಸರಿದಿದ್ದೇ ನೆ. ನಾಳೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನ.13ರಂದು ಕಾಂಗ್ರೆಸ್ ಪಕ್ಷ ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

ಬೆಂಗಳೂರು: ಮಾನಸಿಕವಾಗಿ ನಾನು ಬಿಜೆಪಿಯಿಂದ ದೂರ ಸರಿದಿದ್ದೇ ನೆ. ನಾಳೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನ.13ರಂದು ಕಾಂಗ್ರೆಸ್ ಪಕ್ಷ ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.
ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಳೆದೆರಡು ದಿನಗಳಲ್ಲಿ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ಡಿಕೆ ಶಿವಕುಮಾರ್ ,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ್ದೇನೆ. ಕಾಂಗ್ರೆಸ್ ನಾಯಕರು ತಮಗೆ ಟಿಕೆಟ್ ನೀಡುವ ಭರವಸೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕೊಡುತ್ತೇನೆ, ಸುಮ್ಮನಿರು ಎಂದರು. ಯಡಿಯೂರಪ್ಪ ಮಾತು ಕೇಳಿ ಸುಮ್ಮನಾದೆ. ಆದರೆ, ಈಗ ಶ್ರೀಮಂತ ಪಾಟೀಲ್ ಗೆಲ್ಲಿಸಿಕೊಂಡು ಬನ್ನಿ ಎನ್ನುತ್ತಿದ್ದಾರೆ. ಈ ಹಿಂದೆ ಅವರ ವಿರುದ್ಧ ಪ್ರಚಾರ ಮಾಡಿ ಈಗ ಅವರ ಗೆಲುವಿಗೆ ಹೋರಾಡುವುದು ಸರಿಯಲ್ಲ ಮತ್ತು ಅದು ಆಗುವುದಿಲ್ಲ ಎಂದೆ. ಇದೇ ಹಿನ್ನೆಲೆಯಲ್ಲಿ ಈಗ ಪಕ್ಷ ಬಿಡುವ ನಿರ್ಧಾರ ಕೈಗೊಂಡಿದ್ದು. ಈಗ ಎಲ್ಲವೂ ಮುಗಿದ ಅಧ್ಯಾಯ ಎಂದರು.
ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು, ಪಕ್ಷದಿಂದ ಟಿಕೆಟ್ ನೀಡುವ ಭರವಸೆ ಸಿಕ್ಕಿದೆ. ಈಗ ಬಿಜೆಪಿಯವರು ಎಷ್ಟೇ ಮನವೊಲಿಸುದರೂ ಪ್ರಯೋಜನವಿಲ್ಲ. ಎಲ್ಲವೂ ನಿರ್ಧಾರವಾಗಿದೆ. ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಸಿಎಂ ಪದವಿ ಕೊಟ್ಟರು ನಾನು ಮರಳಿ ಬಜೆಪಿಗೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಕಾಗವಾಡ ಕ್ಷೇತ್ರದಲ್ಲಿ ಅನರ್ಹ ಶಾಸಕ ಶ್ರೀಮಂತಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಲು ಮುಂದಾಗಿರುವ ಹಿನ್ನೆಲೆ ಕ್ಷಿಪ್ರ ರಾಜಕೀಯಕ್ಕೆ ಮುಂದಾದ ರಾಜು ಕಾಗೆ ಈ ನಿರ್ಧಾರ ಪ್ರಕಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


