ಶಾಸಕರ ಅನರ್ಹತೆ ಕುರಿತು 'ಸುಪ್ರೀಂ' ತೀರ್ಪು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಿಷ್ಟು?
17 ಅನರ್ಹ ಶಾಸಕರ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು ಈ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: 17 ಅನರ್ಹ ಶಾಸಕರ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು ಈ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ರಮೇಶ್ ಕುಮಾರ್ ಅವರು, ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಗೌರವಿಸುತ್ತೇನೆ. ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಅನರ್ಹರನ್ನು ಆಕೆ ಮಾಡುವುದು ಮತದಾರರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ 2023ರವರೆಗೆ ಅಂದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಇದೇ ವೇಳೆ ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


